ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ: ಡಿಜಿಪಿ ಅಲೋಕ್‌ ಮೋಹನ್‌

Public TV
1 Min Read
Rameshwaram Cafe

ಬೆಂಗಳೂರು: ವೈಟ್‌ಫೀಲ್ಡ್‌ ಬಳಿಯ ಬ್ರೂಕ್‌ಫೀಲ್ಡ್‌ ಕುಂದಲನಹಳ್ಳಿ ಮುಖ್ಯರಸ್ತೆಯಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್‌ ಸ್ಫೋಟವಾಗಿದೆ (Bomb Blast) ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ (DGP Alok Mohan) ದೃಢಪಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸರು ತನಿಖೆ ಆರಂಭಿಸಿದ್ದು, ಕೆಲ ಅನುಮಾನಾಸ್ಪದ ವಸ್ತುಗಳು ಸ್ಥಳದಲ್ಲಿ ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಬಾಂಬ್ ಸ್ಫೋಟಗೊಂಡಿದೆ. ವಿಧಿ ವಿಜ್ಞಾನ ತಂಡ (Forensic Science Team) ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು.

ಘಟನೆಯಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್‌ ಅವರು ಮಾಹಿತಿ ಪಡೆದಿದ್ದಾರೆ. ಎಫ್‌ಎಸ್‌ಎಲ್‌ ತಂಡದ ಪರಿಶೀಲನೆ ಬಳಿಕಪೂರ್ಣ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ರಾಮೇಶ್ವರಂ ಕೆಫೆಯ ಕೈ ತೊಳೆಯುವ ಜಾಗದಲ್ಲಿಈ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಬ್ಯಾಟರಿ, ಬೋಲ್ಟ್‌ಗಳು ಪತ್ತೆಯಾಗಿದೆ. ಪೊಲೀಸರ ಜೊತೆ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಅಧಿಕಾರಿಗಳು, ಭಯೋತ್ಪಾದನಾ ನಿಗ್ರಹ ದಳ ಭೇಟಿ ನೀಡಿದ್ದು ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: Exclusive: 10 ಸೆಕೆಂಡುಗಳಲ್ಲೇ ಎರಡು ಬಾರಿ ಸ್ಫೋಟ – ರಾಮೇಶ್ವರಂ ಕೆಫೆ ಎಂಡಿ ಸ್ಫೋಟಕ ಮಾಹಿತಿ

Share This Article