ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ನೀಡುವ ಮಹತ್ವದ ಘೋಷಣೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೂ ಏಪ್ರಿಲ್‍ನಿಂದ ಜೂನ್‍ವರೆಗೆ ಅಕ್ಕಿ ವಿತರಣೆ ಮಾಡಲು ಸರ್ಕಾರ ಆದೇಶ ನೀಡಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಸಿಗಲಿದೆ. ಆದರೆ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರ ಹಣ ನಿಗದಿ ಮಾಡಿದೆ. ಹೀಗಾಗಿ ಎಪಿಎಲ್ ಕಾರ್ಡ್ ಅರ್ಜಿದಾರರು ಪ್ರತಿ ಕೆಜಿಗೆ 15 ರೂ.ರಂತೆ 10 ಕೆಜಿ ಅಕ್ಕಿ ಖರೀದಿಸಬಹುದಾಗಿದೆ.
Advertisement
Advertisement
ಈವರೆಗೂ ಬಿಪಿಎಲ್ ಕಾರ್ಡ್‍ಗೆ 1,88,152 ಕುಟುಂಬ ಹಾಗೂ ಎಪಿಎಲ್ ಕಾರ್ಡ್‍ಗೆ 61,333 ಕುಟುಂಬಗಳು ಅರ್ಜಿ ಸಲ್ಲಿಸಿವೆ. ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.