ರೇವ್ ಪಾರ್ಟಿ ಪ್ರಕರಣ – ನಟಿ ಹೇಮಾಗೆ ಜೂ.14ರವರೆಗೆ ನ್ಯಾಯಾಂಗ ಬಂಧನ

Public TV
1 Min Read
ACTRESS HEMA

ಬೆಂಗಳೂರು: ರೇವ್ ಪಾರ್ಟಿ (Rave Party) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದ ಆರೋಪದ ಮೇಲೆ ತೆಲಗು ನಟಿ ಹೇಮಾ (Hema) ಅವರನ್ನು ಸಿಸಿಬಿ ಪೊಲೀಸರು (CCB) ಬಂಧಿಸಿದ್ದಾರೆ. ಬಂಧನಕ್ಕೊಳಗಾದ ನಟಿಯನ್ನು ಜೂ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಂಯಾಂಗ ಬಂಧನಕ್ಕೆ ಆದೇಶಿಸಿದೆ.

ಇತ್ತೀಚೆಗೆ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗದೇ ಸಮಯಾವಕಾಶ ಕೇಳಿದ್ದರು. ಹಾಜರಾಗದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು 2ನೇ ನೋಟಿಸ್ ಕೂಡ ನೀಡಿದ್ದರು.

ಇಂದು ಸಂಜೆ 4 ಗಂಟೆಗೆ ಬೆಂಗಳೂರಿಗೆ ಆಗಮಿಸಿರುವ ಅವರು ಬುರ್ಖಾ ತೊಟ್ಟು ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಈ ವೇಳೆ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಅವರು ಸಮರ್ಪಕ ಉತ್ತರ ನೀಡಿಲ್ಲ. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್‌ಗಾಗಿ ಪೊಲೀಸರು ಕರೆದೊಯ್ದಿದ್ದಾರೆ. ವೈದ್ಯರು ನಟಿ ಹೇಮಾ ಅವರ ಹೇರ್ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ಅಲ್ಲದೇ ಅವರಿಗೆ ಜ್ವರ ಇರುವ ಹಿನ್ನೆಲೆ ಚಿಕಿತ್ಸೆ ನೀಡಿದ್ದಾರೆ.

Share This Article