ನಾನು ಹೈದರಾಬಾದ್‍ನಲ್ಲಿ ಇದ್ದೇನೆ ಎಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಹೈಡ್ರಾಮ ಸೃಷ್ಟಿಸಿದ್ದ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ನಗರದ ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 27ಕ್ಕೆ ವಿಚಾರಣೆಗೆ ಬರುವಂತೆ ಹೇಮಾ ಸೇರಿ ಐವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್
Advertisement
Advertisement
ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ನಾನು ಹೈದರಾಬಾದ್‍ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು. ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.
Advertisement
Advertisement
ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿದೆ. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಹೇಳಿದ್ದರು. ಅಲ್ಲದೇ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು.
73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು.