ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯನ್ನ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸುವುದು ಬಹುತೇಕ ಖಚಿತವಾಗಿದೆ.
ಬೆಂಗಳೂರಿನಲ್ಲಿ ಡಬಲ್ ಮರ್ಡರ್‍ಗಳು ಸೇರಿದಂತೆ ಹಲವು ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದ ಭೂಗತ ಪಾತಕಿ ರವಿ ಪೂಜಾರಿ, ಸಿಸಿಬಿ ಎಸಿಪಿ ವೇಣುಗೋಪಾಲ್ ಆ್ಯಂಡ್ ಟೀಂ ಪಾತಕಿಯನ್ನ ವಿಚಾರಣೆ ಮಾಡಲಿದ್ದಾರೆ.
Advertisement
Advertisement
ಪಶ್ಚಿಮ ಆಫ್ರಿಕಾದ ಸೆನೆಗಲ್‍ನಿಂದ ಕಾನೂನು ಪ್ರಕ್ರಿಯೆ ಮುಗಿಸಿ ಕರೆದುಕೊಂಡು ಬಂದಿದ್ದಾರೆ. ಪಾತಕಿ ರವಿಯನ್ನ ಸೆನೆಗಲ್‍ನಿಂದ ಲಾ ಆ್ಯಂಡ್ ಆರ್ಡರ್ ಎಡಿಜಿಪಿ ಅಮರ್ ಕುಮಾರ್ ಪಾಂಡೆ ನೇತೃತ್ವದ ತಂಡ ಭಾನುವಾರ ರಾತ್ರಿ ಬೆಂಗಳೂರಿಗೆ ಕರೆದುಕೊಂಡು ಬಂದಿದೆ.
Advertisement
ಏರ್‍ಪೋರ್ಟ್ ನಿಂದ ಪಾತಕಿ ರವಿ ಪೂಜಾರಿಯನ್ನು ನೇರವಾಗಿ ಮಡಿವಾಳದ ಎಫ್‍ಎಸ್‍ಎಲ್ ಕೇಂದ್ರದಲ್ಲಿ ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ಡಾನ್ ರವಿ ಪೂಜಾರಿಯನ್ನು ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದೆ. ಬೆಂಗಳೂರಿನಲ್ಲಿ ಡಬಲ್ ಮರ್ಡರ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗೆ ಬೇಕಾಗಿರುವ ಕಾರಣ ಆರೋಪಿಯನ್ನ ಸಿಸಿಪಿ ಪೊಲೀಸ್ರು ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ.
Advertisement
ಶಾಸಕರಾದ ತನ್ವೀರ್ ಸೇಠ್, ಹೆಚ್‍ಎಂ ರೇವಣ್ಣ, ಮಾಜಿ ಶಾಸಕ ಅನಿಲ್ ಲಾಡ್‍ಗೆ ಹಣಕ್ಕೆ ಬೆದರಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದ. ಮಲ್ಪೆ ಮೂಲದ ಈ ಗ್ಯಾಂಗ್‍ಸ್ಟರ್ ವಿರುದ್ಧ ಮಂಗಳೂರಿನಲ್ಲಿ 39, ಬೆಂಗಳೂರಿನಲ್ಲಿ 38 ಕೇಸ್ ಇವೆ. ಮಲ್ಪೆ ಮೂಲದ ರವಿ ಪೂಜಾರಿ ಮುಂಬೈನಲ್ಲಿಯೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದನು. ಬಾಲಾ ಜ್ವಾಲೆಯನ್ನು ಕೊಲೆ ಮಾಡಿದ್ದ ರವಿ ಪೂಜಾರಿ ಭೂಗತ ಲೋಕದಲ್ಲಿ ಪ್ರವರ್ಧಮಾನಕ್ಕೆ ಬಂದು, ಭೂಗತ ಪಾತಕಿ ಚೋಟಾ ರಾಜನ್ ತಂಡಕ್ಕೆ ಸೇರ್ಪಡೆಯಾಗಿದ್ದನು. 1990ರಲ್ಲಿ ದುಬೈಗೆ ಎಸ್ಕೇಪ್ ಆಗಿದ್ದ ರವಿ ಪೂಜಾರಿ ಅಲ್ಲಿಂದಲೇ ಬಾಲಿವುಡ್ ನಟರಾದ ಶಾರೂಖ್ ಖಾನ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ನಿರ್ದೇಶಕ ಕರಣ್ ಜೋಹಾರ್, ನಿರ್ಮಾಪಕ ರಾಕೇಶ್ ರೋಷನ್‍ಗೆ ಬೆದರಿಕೆ ಹಾಕಿದ್ದನು. ತನ್ನ ಹಿಂಬಾಲಕರ ಮೂಲಕ ಮುಂಬೈನಲ್ಲಿ ಓಂಪ್ರಕಾಶ್ ಕುಕ್ರೆಜಾ ಕೊಲೆ, ಬಿಲ್ಡರ್ಸ್ ಕೊಲೆಗೆ ಯತ್ನಿಸಿದ್ದನು.