ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೆ ಭಾರೀ ಚಳಿ ಆವರಿಸಿದ್ದು, ಬುಧವಾರ ಹಾಗೂ ಗುರುವಾರ ಅತ್ಯಂತ ಕನಿಷ್ಠ ತಾಪಮಾನ (Minimum Temperature) 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ನಾಲ್ಕು ವರ್ಷದಲ್ಲೇ ಅತ್ಯಂತ ಕನಿಷ್ಠ ಚಳಿ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ನಾಲ್ಕು ವರ್ಷದ ಹಿಂದೆ 2019ರ ಜನವರಿ 2 ರಂದು ಅತ್ಯಂತ ಕಡಿಮೆ ತಾಪಮಾನ 12.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅದಾದ ನಂತರ ಈವರೆಗಿನ ನಾಲ್ಕು ವರ್ಷಗಳಲ್ಲಿ ದಾಖಲೆಯ ಮಟ್ಟಿದಲ್ಲಿ ಅತೀ ಕಡಿಮೆ ಚಳಿ ದಾಖಲಾಗಿರಲಿಲ್ಲ. ಭಾರತೀಯ ಹವಾಮಾನ ಇಲಾಖೆ ದಾಖಲೆ ಪ್ರಕಾರ ಬೆಂಗಳೂರಿನಲ್ಲಿ ತೀವ್ರ ಚಳಿ 1984ರ ಜನವರಿ 13 ರಂದು ದಾಖಲಾಗಿತ್ತು. ಅಂದು ಕನಿಷ್ಠ ತಾಪಮಾನ 7.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಸಾರ್ವಕಾಲಿಕ ದಾಖಲೆ ಆಗಿದೆ. ಇದಾದ ಬಳಿಕ ನಗರದಲ್ಲಿ ಹೆಚ್ಚು ಚಳಿ ದಾಖಲಾತಿ ನೋಡುವುದಾದರೆ 1992 ಜನವರಿ 9 ರಂದು ಕನಿಷ್ಠ ಉಷ್ಣಾಂಶ 11.2 ಡಿಗ್ರಿ ಸೆಲ್ಸಿಯಸ್, 1992 ರಂದು ಜನವರಿ 6ಕ್ಕೆ 11.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇದನ್ನೂ ಓದಿ: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್
Advertisement
Advertisement
ರಾಜ್ಯದ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ಗಿಂತಲೂ ಕಡಿಮೆ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 6 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ 8.1 ಡಿಗ್ರಿ ಸೆಲ್ಸಿಯಸ್, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ 7.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ಎರಡು ದಿನಗಳ ಕಾಲ ಈ ಜಿಲ್ಲೆಗಳು ಸೇರಿದಂತೆ ದಾವಣಗೆರೆ, ಹಾವೇರಿ, ಬೆಳಗಾವಿ, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಶೀತ ಮಾರುಗಳು ಸಕ್ರಿಯವಾಗಿರಲಿವೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಾಮಚರಿತಮಾನಸ ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ – ಶಿಕ್ಷಣ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k