ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಕೊರೊನಾ

Public TV
1 Min Read
corona covid

ಬೆಂಗಳೂರು: ನಗರದಲ್ಲಿ ಕೊರೊನಾ (Corona) ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಸೋಂಕಿನ ಜೊತೆಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಸೋಮವಾರ ಒಂದೇ ದಿನ 308 ಮಂದಿಗೆ ಕೊರೋನಾ ಬಂದಿದೆ. ಈ ವರ್ಷ ಬೆಂಗಳೂರಿನಲ್ಲಿ (Bengaluru) ದಾಖಲಾದ ಎರಡನೇ ಅತಿಹೆಚ್ಚಿನ ಪಾಸಿಟಿವ್ ಸಂಖ್ಯೆ ಇದಾಗಿದೆ. ಇದನ್ನೂ ಓದಿ: ಭಾರೀ ಸಂಖ್ಯೆಯಲ್ಲಿ ಹೊಸಬರಿಗೆ ಮಣೆ – ಕರ್ನಾಟಕ ಬಿಜೆಪಿಯಿಂದ ಗುಜರಾತ್‌ ದಾಖಲೆ ಬ್ರೇಕ್‌

ಏ.13 ರಂದು 328 ಮಂದಿಯಲ್ಲಿ ಕೊರೊನಾ ದೃಢಪಟ್ಟಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಭಾರತದಲ್ಲಿ 9,111 ಮಂದಿಗೆ ಕೊರೊನಾ ದೃಢಪಟ್ಟಿದ್ದು 24 ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 6, ಉತ್ತರ ಪ್ರದೇಶದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

Share This Article