– ಆಕ್ಸಿಡೆಂಟ್ ಆದ ರಸ್ತೆ ನಮ್ಮ ವಾಪ್ತಿಗೆ ಬರಲ್ಲ ಅಂದ್ರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬರು ದುರ್ಮರಣಕ್ಕೀಡಾದ ಘಟನೆ ವಿಶ್ವೇಶ್ವರಯ್ಯ ಲೇಔಟ್ 4ನೇ ಹಂತ ಮಂಗನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
Advertisement
ಮೃತ ದುರ್ದೈವಿಯನ್ನು ಖುರ್ಷಿದ್ ಅಹಮ್ಮದ್ (60) ಎಂದು ಗುರುತಿಸಲಾಗಿದೆ. ಇವರು ಹರಿಯಾಣ ಮೂಲದವರಾಗಿದ್ದು, ಜಯನಗರದಲ್ಲಿ ನೆಲೆಸಿದ್ದಾರೆ. ಇವರು ಬೈಕ್ ನಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಟ್ಟಾಗಿ ಹೋಗೋಣವೆಂದು ಹೆಚ್‍ಡಿಕೆಗೆ ಹೇಳಿದ್ದೇನೆ: ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆ
Advertisement
Advertisement
ಈ ಸಂಬಂಧ ಬಿಬಿಎಂಪಿ ಮುಖ್ಯ ಅಭಿಯಂತರ ಪ್ರಹ್ಲಾದ್ ಪ್ರತಿಕ್ರಿಯಿಸಿ, ಈ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ಘಟನೆ ನಡೆದ ಸ್ಥಳ ಪಾಲಿಕೆ ವ್ಯಾಪ್ತಿಗೆ ಬರಲ್ಲ. ಬದಲಾಗಿ ಇದು ಬಿಡಿಎ ವ್ಯಾಪ್ತಿಗೆ ಬರಲಿದೆ. ಬಿಡಿಎ ವಿಶ್ವೇಶ್ವರಯ್ಯ ಲೇಔಟ್ ಸಂಬಂಧಿತ ಎಂಬ ಮಾಹಿತಿ ಇದೆ. ಹೀಗಾಗಿ ಆ ಇಲಾಖೆ ಪ್ರಾಥಮಿಕ ವರದಿ ಆಧರಿಸಿ ಕ್ರಮದ ಬಗ್ಗೆ ತೀರ್ಮಾನ ಅವರೇ ಮಾಡಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ಬೆನ್ನಲ್ಲೇ 11 ಮಂದಿಯಲ್ಲಿ ನಿಫಾ ರೋಗ ಲಕ್ಷಣ- 3 ಜಿಲ್ಲೆಗಳಲ್ಲಿ ಹೈ ಅಲರ್ಟ್
Advertisement
ಇತ್ತ ಸಿಎಂ ನಗರದಲ್ಲಿ ರಸ್ತೆ ಗುಂಡಿಗೆ ವಿಕಲಚೇತನ ಬಲಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಮೊನ್ನೆ ಸಭೆಯಲ್ಲಿ ಸೂಚಿಸಲಾಗಿದೆ. ಸದ್ಯ ಮಳೆ ಇದೆ, ಮಳೆ ಕಮ್ಮಿಯಾದ ಮೇಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ವಾರ್ ಫೂಟ್ ನಲ್ಲಿ ಮಾಡ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ‘ಬಾವಲಿ ಜ್ವರ’ – ರೋಗ ಲಕ್ಷಣ ಏನು, ತಡೆಗಟ್ಟೋದು ಹೇಗೆ?