Bengaluru City

ಒನ್ ವೇನಲ್ಲಿ ಹಿಮ್ಮುಖವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ರೋಡ್‍ರೋಲರ್- ಇಬ್ಬರಿಗೆ ಗಾಯ

Published

on

Share this

ಬೆಂಗಳೂರು: ಏಕಮುಖ ರಸ್ತೆಯಲ್ಲಿ ಹಿಮ್ಮುಖವಾಗಿ ಬರುತ್ತಿದ್ದ ರೋಡ್ ರೋಲರ್ದೆಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಬಳಿ ನಡೆದಿದೆ.

ಘಟನೆಯಿಂದ ಐ20 ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರು ಚಾಲಕ ಮುಕ್ತಾರ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮುಕ್ತಾರ್ ಪತ್ನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ನಂತರ ರೋಡ್ ರೋಲರ್ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಘಟನೆ ಸಂಬಂಧ ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುಕ್ರವಾರದಂದು ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಗಳು ಉರುಳಿ ಬಿದ್ದು ಕಾರು ಜಖಂಗೊಂಡಿದ್ದಲ್ಲದೆ ಒಂದು ಬೈಕ್ ಬೆಂಕಿಗೆ ಅಹುತಿಯಾಗಿತ್ತು. ಕಾರು ಚಾಲಕ ಅತಿ ವೇಗದಿಂದ ಕಾರು ಚಾಲನೆ ಮಾಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಆಗ ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದಿದ್ದು, ಈ ವೇಳೆ ಕಾರಿನ ಹಿಂಬದಿಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ಕಂಬ ಉರುಳಿತು. ಬೈಕ್ ಸವಾರ ತಕ್ಷಣ ಬೈಕ್ ಬಿಟ್ಟು ಓಡಿದ್ದು, ಅವರನ್ನ ಸ್ಥಳದಲ್ಲಿದ್ದವರು ರಕ್ಷಣೆ ಮಾಡಿದ್ರು. ಗಾಯಾಳುವನ್ನ ರಕ್ಷಿಸಿದ ಕೆಲವೇ ಸೆಕೆಂಡ್‍ನಲ್ಲಿ ವಿದ್ಯುತ್ ಸ್ಪರ್ಶದಿಂದ ಬೈಕ್ ಬೆಂಕಿಗೆ ಅಹುತಿಯಾಯ್ತು.

Click to comment

Leave a Reply

Your email address will not be published. Required fields are marked *

Advertisement
Advertisement