ಬೆಂಗಳೂರು: ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಹಣ, ಆರೋಪಿಗಳ ಪತ್ತೆಗೆ ಶೋಧ ಮುಂದುವರಿಸಿದ್ದಾರೆ. ಇದನ್ನೂ ಓದಿ: 7 ಕೋಟಿ ದರೋಡೆ ಕೇಸ್ – ಪೊಲೀಸರ ಕಣ್ತಪ್ಪಿಸಲು ದರೋಡೆಕೋರರ ಮಾಸ್ಟರ್ ಪ್ಲ್ಯಾನ್, ವಾಟ್ಸಪ್ ಕಾಲ್‌ನಲ್ಲಿ ಮಾತ್ರ ಮಾತುಕತೆ!
ದರೋಡೆಕೋರರ ಬೆನ್ನಟ್ಟಿದ್ದ ಪೊಲೀಸರು ಚಿತ್ತೂರಿನಲ್ಲಿ ಇನ್ನೋವಾ ಕಾರನ್ನು ವಶಕ್ಕೆ ಪಡೆದಿದ್ದರು. ದರೋಡೆಕೋರರು ಈ ಕಾರನ್ನು ಕೃತ್ಯಕ್ಕೆ ಬಳಸಿದ್ದರು. ಕಾರು ವಶಕ್ಕೆ ಪಡೆದು ಬೆಂಗಳೂರಿಗೆ ತಂದು ಪರಿಶೀಲನೆ ನಡೆಸಿದ್ದರು. ಯುಪಿ ನೋಂದಣಿಯ ನಂಬರ್ ಪ್ಲೇಟ್ ಅಳವಡಿಸಿ ಗ್ಯಾಂಗ್ ಪರಾರಿಯಾಗಿತ್ತು.
ದರೋಡೆಕೋರರಿಗೆ ಇನ್ನೋವಾ ಕಾರು ಕೊಟ್ಟಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಚಿತ್ತೂರು ಗುಡಿಪಲ್ಲಿ ಬಳಿ ಪತ್ತೆಯಾಗಿದ್ದ ಕಾರು ಎಂಜಿನ್‌ನ ಚಾರ್ಸಿ ನಂಬರ್ ಆಧರಿಸಿ ಇಬ್ಬರನ್ನ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಡಹಗಲೇ ದರೋಡೆ – ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ
ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು, ಗೋವಿಂದಪುರ ಠಾಣೆಯ ಕಾನ್‌ಸ್ಟೇಬಲ್ ಅಣ್ಣಪ್ಪನಾಯ್ಕ್, ಕೇರಳ ಮೂಲದ ದೇವಿಯರ್ ಇಬ್ಬರನ್ನು ಬಂಧಿಸಿದ್ದಾರೆ. ಬುಧವಾರ ರಾತ್ರಿಪಾಳಿಯಲ್ಲಿಯೇ ಇದ್ದ ಅಣ್ಣಪ್ಪನಾಯ್ಕ್ ಗುರುವಾರ ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
