Saturday, 20th July 2019

ಹಾಡಹಗಲೇ ಬಾರ್‌ನಲ್ಲಿ ರೌಡಿಶೀಟರ್ ಬರ್ಬರ ಕೊಲೆ

ಬೆಂಗಳೂರು: ಹಾಡಹಗಲೇ ಬಾರ್ ನಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆಗೈದ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಪಾರ್ವತಿಪುರದ ನಿವಾಸಿ ನಾಗರಾಜು ಅಲಿಯಾಸ್ ಪಿಟ್ಟ ನಾಗರಾಜು ಕೊಲೆಯಾದ ರೌಡಿಶೀಟರ್. ಆತನೊಂದಿಗೆ ಬಾರ್‍ಗೆ ಬಂದಿದ್ದ ಸಹಚರರೇ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಘಟನೆಯ ವಿವರ:
ರೌಡಿಶೀಟರ್ ನಾಗರಾಜು ತನ್ನ ಸಹಚರರ ಜೊತೆಗೆ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಎಂ.ಕೆ.ಬಾರ್ ಗೆ ಕುಡಿಯಲು ಬಂದಿದ್ದ. ಈ ವೇಳೆ ಮದ್ಯದ ಮತ್ತಿನಲ್ಲಿ ನಾಗರಾಜು ತನ್ನ ಸಹಚರರ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಇದರಿಂದಾಗಿ ಕೋಪಗೊಂಡ ಅವರು ನಾಗರಾಜು ಮೇಲೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹತ್ಯೆ ಮಾಡುತ್ತಿದ್ದಂತೆ ಆರೋಪಿಗಳು ಘಟನಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ನಾಗರಾಜು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Leave a Reply

Your email address will not be published. Required fields are marked *