ಬೆಂಗಳೂರು: ರಾಜಧಾನಿಯಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಪೊಲೀಸರು, ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಖ್ಯಾತ ರೌಡಿಶೀಟರ್ ವಿಘ್ನೇಶ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ.
ಬಂಧಿತ ರೌಡಿ ವಿಘ್ನೇಶ್ ವಿರುದ್ಧ ಕೊಲೆ ಯತ್ನ, ಅತ್ಯಾಚಾರ, ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಸೇರಿದಂತೆ ಸುಮಾರು 11ಕ್ಕೂ ಹೆಚ್ಚು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಜಾಮೀನಿನ ಮೇಲೆ ಹೊರಬಂದ ಮೇಲೆಯೂ ಈತ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದ್ದ. ಇದನ್ನೂ ಓದಿ: ಎಸಿಪಿ ರಾಜೇಶ್‌ಗೆ ಡಿಜಿ ಪದಕ ಪ್ರದಾನ
ಹೀಗಾಗಿ, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಈತನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೆಂಗೇರಿ ಪೊಲೀಸರು, ಗೂಂಡಾ ಕಾಯ್ದೆ ಪ್ರಯೋಗಿಸಿ ಕಂಬಿ ಎಣಿಸುವಂತೆ ಮಾಡಿದ್ದಾರೆ.
