– ಡಿ.ಕೆ.ಸುರೇಶ್ ವಿರುದ್ಧ ಡಾ. ಸಿ.ಎನ್.ಮಂಜುನಾಥ್ ಕಣಕ್ಕೆ; ಗ್ರಾಮಾಂತರ ಯಾರ ವಶಕ್ಕೆ?
ಲೋಕಸಭೆ ಚುನಾವಣೆಗೆ (Lok Sabha Election 2024) ಅಖಾಡ ಸಿದ್ಧವಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ (Congress) ಲೋಕಸಭೆಗೆ ಸಿದ್ಧತೆ ಮಾಡಿಕೊಳ್ತಿದೆ. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಸಾರ್ವತ್ರಿಕ ಚುನಾವಣೆ ಅಖಾಡಕ್ಕಿಳಿದಿರುವುದು ಕುತೂಹಲ ಮೂಡಿಸಿದೆ.
Advertisement
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿತ್ತು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ‘ಕೈ’ ಹಿಡಿದಿದ್ದು ಬೆಂಗಳೂರು ಗ್ರಾಮಾಂತರ ಏಕೈಕ ಕ್ಷೇತ್ರ ಮಾತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಿ.ಕೆ.ಸುರೇಶ್ (D.K.Suresh) ಗೆಲುವು ಸಾಧಿಸಿ ಪಾರ್ಲಿಮೆಂಟ್ ಪ್ರವೇಶಿಸಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ 3 ಬಾರಿ ಡಿ.ಕೆ.ಸುರೇಶ್ ಆಯ್ಕೆಯಾಗಿದ್ದಾರೆ. ಡಿಕೆ ಬ್ರದರ್ಸ್ ಭದ್ರಕೋಟೆಯನ್ನು ಹೇಗಾದರು ಮಾಡಿ ಭೇದಿಸಬೇಕು ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಪಣ ತೊಟ್ಟಂತಿದೆ. ಹೀಗಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿರುವ ಡಾ. ಸಿ.ಎನ್.ಮಂಜುನಾಥ್ (Dr. C.N.Manjunath) ಅವರನ್ನು ಮೈತ್ರಿ ಪಕ್ಷಗಳು ಕಣಕ್ಕಿಳಿಸಿದೆ. ಇದನ್ನೂ ಓದಿ: Raichuru Lok Sabha 2024: ರಾಜರ ಊರಲ್ಲಿ ಪಟ್ಟಕ್ಕೇರೋದು ಯಾರು?
Advertisement
Advertisement
ಕ್ಷೇತ್ರ ಪರಿಚಯ
ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರ 2008 ರಲ್ಲಿ ರಚನೆಯಾಯಿತು. ಸಂಸದೀಯ ಕ್ಷೇತ್ರಗಳ ವಿಂಗಡಣೆಯ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾಯಿತು. ಕನಕಪುರ ವಿಧಾನಸಭಾ ಕ್ಷೇತ್ರದಿಂದ ಬೇರ್ಪಟ್ಟು 2009 ರಲ್ಲಿ ಈ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಸಂಸದರಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ 2013 ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಹೆಚ್‌ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ವಿರುದ್ಧ ಪ್ರಪ್ರಥಮ ಬಾರಿಗೆ ಸ್ಪರ್ಧೆಗಿಳಿದಿದ್ದ ಡಿ.ಕೆ.ಸುರೇಶ್ ಗೆಲುವು ದಾಖಲಿಸಿದ್ದರು. 1.27 ಮತಗಳ ಅಂತರದಿಂದ ಗೆದ್ದು ಬೀಗಿದ್ದರು. ನಂತರ 2014 ಮತ್ತು 2019 ರಲ್ಲಿ ನಡೆದ ಚುನಾವಣೆಯಲ್ಲೂ ಡಿ.ಕೆ.ಸುರೇಶ್ ಗೆಲುವು ಸಾಧಿಸಿದ್ದರು.
Advertisement
ಕ್ಷೇತ್ರದಲ್ಲಿ ಎಷ್ಟು ವಿಧಾನಸಭಾ ಕ್ಷೇತ್ರಗಳಿವೆ?
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕುಣಿಗಲ್, ರಾಜರಾಜೇಶ್ವರಿನಗರ, ಆನೇಕಲ್, ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಕ್ಷೇತ್ರಗಳು ಇದರ ವ್ಯಾಪ್ತಿಗೆ ಒಳಪಡುತ್ತವೆ. ಇದನ್ನೂ ಓದಿ: Shivamogga Lok Sabha 2024: ಬಿಎಸ್‌ವೈ v/s ಬಂಗಾರಪ್ಪ ಫ್ಯಾಮಿಲಿ – ಯಾರಿಗೆ ಮಣೆ ಹಾಕ್ತಾರೆ ಮಲೆನಾಡ ಜನ?
ಒಟ್ಟು ಮತದಾರರು ಎಷ್ಟು?
ಈ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 27,63,910 ಇದೆ. ಅವರ ಪೈಕಿ ಪುರುಷರು 14,06,042 ಹಾಗೂ 13,57,547 ಮಹಿಳಾ ಮತದಾರರಿದ್ದಾರೆ. ತೃತೀಯಲಿಂಗಿ ಮತದಾರರು 321 ಮಂದಿ ಇದ್ದಾರೆ.
ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಿ.ಕೆ.ಸುರೇಶ್ ಗೆಲುವು ದಾಖಲಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಈ ಅವಧಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ರಾಜ್ಯದಲ್ಲಿ ಚುನಾವಣೆ ಎದುಸಿದ್ದವು. ಡಿ.ಕೆ.ಸುರೇಶ್ 2,06,870 ಮತಗಳ ಅಂತರದಿಂದ ಜಯಗಳಿಸಿದ್ದರು. ಇವರ ವಿರುದ್ಧ ಬಿಜೆಪಿಯಿಂದ ಅಶ್ವಥ್ ನಾರಾಯಣಗೌಡ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದನ್ನೂ ಓದಿ: Chamarajanagara Lok Sabha 2024: ಕಾಂಗ್ರೆಸ್ ಕೋಟೆಗೆ ಎಂಟ್ರಿ ಕೊಟ್ಟಿರೋ ಬಿಜೆಪಿ ಮತ್ತೆ ಸಿಂಹಾಸನ ಏರುತ್ತಾ?
ಡಿ.ಕೆ.ಸುರೇಶ್ ‘ಕೈ’ ಅಭ್ಯರ್ಥಿ
2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿದ್ದವು. ಆದರೆ ಈ ಸಲ ಉಲ್ಟಾ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾಗಿವೆ. ಬೆಂಗಳೂರು ಗ್ರಾಮಾಂತರದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ನಿಂದ ಮತ್ತೆ ಡಿ.ಕೆ.ಸುರೇಶ್ ಕಣಕ್ಕಿಳಿದಿದ್ದಾರೆ. ಅವರನ್ನು ಸೋಲಿಸಲು ತಂತ್ರ ಹೆಣೆಯಲಾಗುತ್ತಿದೆ.
ಡಿಕೆ ಬ್ರದರ್ಸ್ ಪಾರುಪತ್ಯ
ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಡಿಕೆ ಬ್ರದರ್ಸ್ ಎಂದೇ ಖ್ಯಾತಿಯಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಪಾರುಪತ್ಯ ಜೋರಾಗಿದೆ. ರಾಮನಗರದಲ್ಲೂ ಕಾಂಗ್ರೆಸ್ ಬಲಿಷ್ಠವಾಗಿದೆ. ಈಗ ತಮ್ಮದೇ ಪಕ್ಷ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವುದು ಮತ್ತಷ್ಟು ಬಲತುಂಬಿದಂತಾಗಿದೆ. ಕಾಂಗ್ರೆಸ್ ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪ್ಲಸ್ ಆಗಬಹುದು ಎಂಬ ಲೆಕ್ಕಾಚಾರವೂ ಇದೆ. ಇದನ್ನೂ ಓದಿ: Dakshina Kannada Lok Sabha 2024: ಬಿಜೆಪಿ ಭದ್ರಕೋಟೆ ಭೇದಿಸುತ್ತಾ ಕಾಂಗ್ರೆಸ್?
ಡಾ. ಸಿ.ಎನ್.ಮಂಜುನಾಥ್‌ಗೆ ಮೈತ್ರಿ ಟಿಕೆಟ್
ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಮೈತ್ರಿ ಪಕ್ಷಗಳು ಕಣಕ್ಕಿಳಿಸಿವೆ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಸಿ.ಎನ್.ಮಂಜುನಾಥ್ ಅವರು ಟಿಕೆಟ್ ಗಿಟ್ಟಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟಿಕೆಟ್ ಸಿಕ್ಕ ಬಳಿಕ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಮೈತ್ರಿಯಿಂದ ಬಿಜೆಪಿಗೆ ಲಾಭ?
ಕಾಂಗ್ರೆಸ್ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆಲ್ಲಲು ಬಿಜೆಪಿ-ಜೆಡಿಎಸ್ ರಣತಂತ್ರ ರೂಪಿಸಿವೆ. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಇದುವರೆಗೂ ಖಾತೆ ತೆರೆದಿಲ್ಲ. ಆದರೆ ಬಿಜೆಪಿಗೆ ತನ್ನದೇ ಆದ ಮತಬ್ಯಾಂಕ್ ಈ ಕ್ಷೇತ್ರದಲ್ಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡುತ್ತಲೇ ಬಂದಿತ್ತು. ಆದರೆ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ʼಕಮಲʼಕ್ಕೆ ಇದು ವರದಾನವಾಗುವ ಸಾಧ್ಯತೆಯಿದೆ. ಅಲ್ಲದೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿದ್ದರೂ ಡಿ.ಕೆ.ಸುರೇಶ್ ಹೆಚ್ಚು ಅಂತರದಿಂದ ಗೆದ್ದಿರಲಿಲ್ಲ. ಗ್ರಾಮಾಂತರದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್‌ಗೆ ಈ ಸಲ ಪ್ರಬಲ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?
ಯಾವ ಅವಧಿಯಲ್ಲಿ ಯಾವ ಪಕ್ಷ ಗೆದ್ದಿತ್ತು?
2009: ಹೆಚ್.ಡಿ.ಕುಮಾರಸ್ವಾಮಿ – ಜೆಡಿಎಸ್ (1,30,275 ಗೆಲುವಿನ ಅಂತರ)
2013: ಡಿ.ಕೆ.ಸುರೇಶ್ – ಕಾಂಗ್ರೆಸ್ (1,37,007 )
2014: ಡಿ.ಕೆ.ಸುರೇಶ್ – ಕಾಂಗ್ರೆಸ್ (2,31,480)
2019: ಡಿ.ಕೆ.ಸುರೇಶ್ – ಕಾಂಗ್ರೆಸ್ (2,06,870)
ಜಾತಿವಾರು ಲೆಕ್ಕಾಚಾರ
ಒಕ್ಕಲಿಗರು – 7.10 ಲಕ್ಷ
ಎಸ್‌ಸಿ/ಎಸ್‌ಟಿ – 5.20 ಲಕ್ಷ
ಲಿಂಗಾಯತರು – 2.6 ಲಕ್ಷ
ಕುರುಬರು – 1 ಲಕ್ಷ
ಮುಸ್ಲಿಂ – 2.5 ಲಕ್ಷ
ಇತರೆ – 4 ಲಕ್ಷ