Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

Bengaluru City

ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

Public TV
Last updated: December 2, 2019 12:44 pm
Public TV
Share
2 Min Read
Katha Sangama A
SHARE

ಕನ್ನಡ ಚಿತ್ರರಂಗವನ್ನು ತಮ್ಮ ವಿಭಿನ್ನ ಆಲೋಚನೆಗಳ ಮೂಲಕವೇ ಬೆಳಗಿದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಚಿತ್ರರಂಗ ಒಂದೇ ಬಿಂದುವಿನ ಸುತ್ತ ಗಿರಕಿ ಹೊಡೆಯುತ್ತಿದ್ದ ಕಾಲದಲ್ಲಿಯೇ ಹೊಸ ಸಾಧ್ಯತೆಗಳ ಬ್ರಹ್ಮಾಂಡವನ್ನೇ ಬಿಚ್ಚಿಟ್ಟವರು ಪುಟ್ಟಣ್ಣ ಕಣಗಾಲ್. ಇದರೊಂದಿಗೆ ಪರಭಾಷಾ ಚಿತ್ರರಂಗದ ಮಂದಿಯೇ ಬೆರಗಾಗುವಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಕಣಗಾಲರ ಪ್ರಯೋಗಶೀಲತೆಗೆ ಕಥಾ ಸಂಗಮ ಕಿರೀಟವಿದ್ದಂತೆ. ಇದೀಗ ಈಗಿನ ತಲೆಮಾರಿನ ಕ್ರಿಯಾಶೀಲ ನಿರ್ದೇಶಕ ರಿಷಬ್ ಶೆಟ್ಟಿ ಆ ಕಿರೀಟಕ್ಕೆ ಮತ್ತೊಂದು ಗರಿ ಮೂಡಿಸುವಂತಹ ಪ್ರಯತ್ನ ಮಾಡಿದ್ದಾರೆ. ಅದರ ಫಲವಾಗಿ ರೂಪುಗೊಂಡಂತಿರುವ ಹೊಸ `ಕಥಾ ಸಂಗಮ’ ಡಿಸೆಂಬರ್ 6ರಂದು ಬಿಡುಗಡೆಯಾಗುತ್ತಿದೆ.

Katha Sangama B 1

ಶ್ರೀದೇವಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ಹೆಚ್.ಕೆ ಪ್ರಕಾಶ್, ಪ್ರದೀಪ್ ಎನ್ ಆರ್ ಮತ್ತು ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ ಕಥಾ ಸಂಗಮವೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅಷ್ಟಕ್ಕೂ ರಿಷಬ್ ಶೆಟ್ಟಿ ಒಂದು ಸಿನಿಮಾ ನಿರ್ದೇಶನಕ್ಕಿಳಿದರೆಂದರೆ ಅಲ್ಲೇನೋ ಹೊಸತನ ಇದ್ದೇ ಇರುತ್ತದೆ ಎಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಎಂಬ ಚಿತ್ರವನ್ನವರು ರೂಪಿಸಿದ್ದ ರೀತಿಯೇ ಅವರೆಂತಹ ಭಿನ್ನ ನಿರ್ದೇಶಕ ಎಂಬುದಕ್ಕೆ ಸ್ಪಷ್ಟ ಸಾಕ್ಷಿ. ಈ ಕಥಾ ಸಂಗಮದಲ್ಲಂತೂ ಅವರು ಕನ್ನಡ ಚಿತ್ರರಂಗದ ಘನತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಂತಹ ಪ್ರಯತ್ನ ಮಾಡಿದ್ದಾರೆ. ಎಪ್ಪತ್ತರ ದಶಕದಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ್ದ ಚಿತ್ರದಲ್ಲಿ ನಾಲ್ಕು ಕಥೆಗಳನ್ನು ಹೇಳಿದ್ದರು. ರಿಷಬ್ ಶೆಟ್ಟರು ಈ ಕಥಾ ಸಂಗಮದಲ್ಲಿ ಏಳು ಕಥೆಗಳನ್ನು ಹೇಳಿದ್ದಾರೆ. ಇಲ್ಲಿ ಏಳು ಜನ ನಿರ್ದೇಶಕರು, ಏಳು ಮಂದಿ ಛಾಯಾಗ್ರಾಹಕರು ಮತ್ತು ಏಳು ಜನ ಸಂಗೀತ ನಿರ್ದೇಶಕರು ಸೇರಿ ಈ ಸಿನಿಮಾವನ್ನು ನಿರ್ವಹಿಸಿದ್ದಾರೆ. ರಿಷಬ್ ಶೆಟ್ಟಿ ಅದರ ಸೂತ್ರ ಹಿಡಿದು ಮುನ್ನಡೆಸಿದ್ದಾರೆ. ಈ ಸಿನಿಮಾಗೀಗ ಸೆನ್ಸಾರ್ ಮಂಡಳಿ ಕಡೆಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

KATHA SANGAMA

ಈ ಮೂಲಕ ಒಂದೇ ಸಿನಿಮಾದಲ್ಲಿ ಏಳು ಸಿನಿಮಾ ನೋಡುವ ಸದಾವಕಾಶ ಪ್ರೇಕ್ಷಕರಿಗೆ ಸಿಕ್ಕಿದೆ. ಕ್ರೈಂ, ಸಸ್ಪೆನ್ಸ್ ಥ್ರಿಲ್ಲರ್ ಸೇರಿದಂತೆ ಹಲವು ಬಗೆಯ ಕಥೆಗಳನ್ನು ಒಂದೇ ಸಿನಿಮಾದಲ್ಲಿ ಕಣ್ತುಂಬಿಕೊಳ್ಳುವ ಅಪರೂಪದ ಕ್ಷಣಗಳು ಹತ್ತಿರವಾಗುತ್ತಿವೆ. ನಿರ್ದೇಶಕ ರಿಷಬ್ ಶೆಟ್ಟಿ ಸದಾ ಸಿನಿಮಾ ಧ್ಯಾನದಲ್ಲಿಯೇ ತಲ್ಲೀನರಾಗಿರುವವರು. ಕಥಾ ಸಂಗಮದಂತಹ ಗುಂಗೀಹುಳ ಅವರ ಮನಸ್ಸು ಹೊಕ್ಕು ಕೆಲಸ ಶುರುವಿಟ್ಟುಕೊಂಡಿದ್ದದ್ದು ವರ್ಷಗಳ ಹಿಂದೆ. ನಂತರ ಪಟ್ಟು ಬಿಡದೇ ಏಳು ಮಂದಿ ಪ್ರತಿಭಾವಂತರನ್ನು ಹುಡುಕಿ, ಚೆಂದದ ಕಥೆಗಳನ್ನು ಆಯ್ಕೆ ಮಾಡಿಕೊಂಡು ಈ ರಿಸ್ಕಿ ಸಾಹಸಕ್ಕೆ ಕೈ ಹಾಕಿದ್ದರು. ಪುಟ್ಟಣ್ಣ ಕಣಗಾಲರ ಸ್ಫೂರ್ತಿಯಿಂದಲೇ ತಯಾರಾದ ಈ ಸಿನಿಮಾವನ್ನು ಅವರಿಗೇ ಅರ್ಪಿಸುವ ಮೂಲಕ ಗೌರವ ತೋರಿಸಲಾಗಿದೆ. ಕಣಗಾಲರ ಕೀರ್ತಿಯನ್ನು ಮತ್ತಷ್ಟು ಮಿರುಗಿಸುವಂತೆಯೇ ಈ ಸಿನಿಮಾ ಮೂಡಿ ಬಂದಿದೆ ಅನ್ನೋದು ಈಗಾಗಲೇ ಸ್ಪಷ್ಟಗೊಂಡಿದೆ.

KATHA SANGAMA 1

ಕಥಾ ಸಂಗಮದ ಮೂಲಕ ಕಿರಣ್ ರಾಜ್ ಕೆ, ಶಶಿಕುಮಾರ್ ಪಿ, ಚಂದ್ರಜಿತ್ ಎಲಿಯಪ್ಪ, ರಾಹುಲ್ ಪಿ.ಕೆ, ಜೈ ಶಂಕರ್, ಕರಣ್ ಅನಂತ್, ಜಮದಗ್ನಿ ಮನೋಜ್ ಎಂಬ ಏಳು ಮಂದಿ ಪ್ರತಿಭಾವಂತ ನಿರ್ದೇಶಕರನ್ನು ರಿಷಬ್ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ರಿಷಬ್ ಶೆಟ್ಟಿ, ಹರಿಪ್ರಿಯಾ, ರಾಜ್ ಬಿ ಶೆಟ್ಟಿ, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ, ಯಜ್ಞಾ ಶೆಟ್ಟಿ, ಪ್ರಕಾಶ್ ಬೆಳವಾಡಿ, ಬಾಲಾಜಿ ಮನೋಹರ್ ಮುಂತಾದವರು ಈ ಏಳೂ ಕಥೆಗಳ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಏಳೂ ಕಥೆಗಳ ಪ್ರತೀ ಪಾತ್ರಗಳೂ ಅದೆಷ್ಟು ಭಿನ್ನವಾಗಿವೆ ಅನ್ನೋದಕ್ಕೆ ಮೊನ್ನೆ ಬಿಡುಗಡೆಗೊಂಡಿರೋ ಟ್ರೇಲರ್‍ನಲ್ಲಿ ಸಾಕ್ಷಿಗಳಿವೆ. ವಾರದೊಪ್ಪತ್ತಿನಲ್ಲಿಯೇ ಕಥಾ ಸಂಗಮ ಪ್ರೇಕ್ಷಕರೆದುರು ತೆರೆದುಕೊಳ್ಳಲಿದೆ.

 

TAGGED:Balaji ManoharhriprriyaKatha Sangamakishor kumarprakash belavadiPramod Shettyputtanna kanagalRaj B ShettyrishabshettyYajna Shettyಕಥಾ ಸಂಗಕಿಶೋರ್ ಕುಮಾರ್ಪುಟ್ಟಣ್ಣ ಕಣಗಾಲ್ಪ್ರಕಾಶ್ ಬೆಳವಾಡಿಪ್ರಮೋದ್ ಶೆಟ್ಟಿಬಾಲಾಜಿ ಮನೋಹರ್ಯಜ್ಞಾ ಶೆಟ್ಟಿರಾಜ್ ಬಿ.ಶೆಟ್ಟಿರಿಷಬ್ ಶೆಟ್ಟಿಹರಿಪ್ರಿಯಾ
Share This Article
Facebook Whatsapp Whatsapp Telegram

Cinema news

gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories
Rajinikanth Padayappa 2
ಪಡೆಯಪ್ಪ ಪಾರ್ಟ್-2 ಬಗ್ಗೆ ತಲೈವಾ ಹೇಳಿದ್ದೇನು?
Cinema Latest Top Stories
V. Shantaram Biopic Tamannaah Bhatia
ನಟಿ ಜಯಶ್ರೀಯಾದ ತಮನ್ನಾ ಭಾಟಿಯಾ
Cinema Latest Top Stories

You Might Also Like

Dharmasthala SIT Report
Bengaluru City

ಹಣ ಪಡೆದು ಬುರುಡೆ ಕಥೆ ಕಟ್ಟಿದ್ದ ಚಿನ್ನಯ್ಯ – ಎಸ್‌ಐಟಿ ವರದಿಯಲ್ಲಿ ಏನಿದೆ?

Public TV
By Public TV
3 minutes ago
davanagere suicide
Davanagere

ಸರ್ಕಾರಿ ಕೆಲಸ ಸಿಗಲಿಲ್ಲ ಅಂತ ಮನನೊಂದು ಯುವಕ ಆತ್ಮಹತ್ಯೆ

Public TV
By Public TV
6 minutes ago
Yadagiri Fire Accident
Districts

ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ – 1 ಕೋಟಿ ಮೌಲ್ಯದ 60 ಟನ್‌ಗೂ ಅಧಿಕ ಹತ್ತಿ ಭಸ್ಮ

Public TV
By Public TV
1 hour ago
karwar jail
Crime

ಕಾರವಾರ ಜೈಲಲ್ಲಿ ಕೈದಿಗಳಿಂದ ಮತ್ತೆ ದಾಂಧಲೆ; ಜೈಲಲ್ಲಿದ್ದ ಟಿ.ವಿ ಸೇರಿ ಹಲವು ವಸ್ತುಗಳ ಧ್ವಂಸ

Public TV
By Public TV
3 hours ago
Traffic Fine
Bengaluru City

ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ – 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥ, 16.63 ಕೋಟಿ ದಂಡ ಸಂಗ್ರಹ

Public TV
By Public TV
3 hours ago
H 1B Visa
Latest

ಅಮೆರಿಕ ಸೋಷಿಯಲ್‌ ಮೀಡಿಯಾ ಹೊಸ ರೂಲ್ಸ್‌ – ಭಾರತೀಯರಿಗೆ H-1B ವೀಸಾ ನೇಮಕಾತಿ ಮುಂದೂಡಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?