– ಯಾರು ಮಾಡಿದ್ದಾರೆ ಅನ್ನೋದು ನಮಗೆ ಚೆನ್ನಾಗಿ ಗೊತ್ತಿದೆ
ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆ ಚಿತ್ರ ಕೋಟಿಗೊಬ್ಬ-3 ವಿಳಂಬಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ಕಿಚ್ಚ ಧೈರ್ಯ ತುಂಬಿದ್ದಾರೆ.
ಈ ಸಂಬಂಧ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಕಿಚ್ಚ, ಬಾಬು ಅವರು ಅಪ್ಲೋಡ್ ಮಾಡಿದ ವೀಡಿಯೋ ನಾನು ನೋಡಿದೆ. ನೀವೊಬ್ಬರೇ ಅಲ್ಲ ನಿಮ್ಮ ಜೊತೆ ನಾವಿದ್ದೇವೆ. ಯಾರಿಂದ ತೊಂದರೆ ಆಗಿದೆ, ಯಾರು ಮಾಡಿದ್ದಾರೆ ಅನ್ನೋದು ನಮಗೆ ಚೆನ್ನಾಗಿ ಗೊತ್ತಿದೆ. ಅದಕ್ಕೆ ಕಾಲವೇ ಉತ್ತರ ಕೊಡುತ್ತದೆ. ನಾಳೆಯಿಂದ ಪ್ರದರ್ಶನ ಕಾಣುತ್ತದೆ. ಭರ್ಜರಿಯಾಗಿ ಹೋಗುತ್ತದೆ ಅನ್ನೋದ್ರಲ್ಲಿ ಅನುಮಾನ ಇಲ್ಲ ಎಂದಿದ್ದಾರೆ.
Thank you all friends for ua support and love.
????❤ pic.twitter.com/Ri7Vhpwl3Q
— Kichcha Sudeepa (@KicchaSudeep) October 14, 2021
ಅಲ್ಲದೆ ಸ್ನೇಹಿತರಲ್ಲಿ ಕೇಳಿಕೊಳ್ಳುವುದುಬ ಇಷ್ಟೇ, ಯಾವುದೇ ಚಿತ್ರಮಂದಿರಗಳಿಗೆ ಡೈಮೇಜ್ ಮಾಡಬೇಡಿ. ನನಗೆ ನೀವು ತೋರಿಸುತ್ತಿರುವ ಪ್ರೀತಿ ತಿಳಿದಿದೆ. ಆದರೆ ಚಿತ್ರಮಂದಿರಗಳದ್ದು ತಪ್ಪಿಲ್ಲ. ನಾಳೆಯಿಂದ ಒಳ್ಳೆಯ ರೀತಿಯ ಪ್ರದರ್ಶನವನ್ನ 6 ಗಂಟೆಯಿಂದ ನೋಡ್ತೀರಿ ನೀವೆಲ್ಲ. ಎಲ್ಲರಿಗೂ ಧನ್ಯವಾದ. ಇವತ್ತು ಆಗಿರುವ ಈ ವಿಳಂಬಕ್ಕೆ ಕ್ಷಮೆ ಇರಲಿ ಎಂದು ವೀಡಿಯೋದಲ್ಲಿ ಅಭಿಮಾನಿಗಳಿಗೆ ಹಾಗೂ ಸಿನಿಮಾ ಟೀಮ್ ಗೆ ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಿಚ್ಚನ ಅಭಿಮಾನಿಗಳಲ್ಲಿ ಸೂರಪ್ಪ ಬಾಬು ಕ್ಷಮೆ
????❤ pic.twitter.com/9MYEZHbGbM
— Kichcha Sudeepa (@KicchaSudeep) October 14, 2021
ರಾಜ್ಯಾದ್ಯಂತ ಇಂದು ಸುಮಾರು 300 ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ-3 ರಿಲೀಸ್ ಆಗಬೇಕಿತ್ತು. ಅದಕ್ಕಾಗಿ ಕಿಚ್ಚನ ಅಭಿಮಾನಿಗಳು ಕೂಡ ಸಜ್ಜಾಗಿದ್ದರು. ಆದರೆ ಈ ಮಧ್ಯೆ ಸಿನಿಮಾ ರಿಲೀಸ್ ವಿಳಂಬವಾಗಿದ್ದು, ಇದು ಕಿಚ್ಚನ ಅಭಿಮಾನಿಗಳಿಗೆ ಆಕ್ರೋಸ ಹೊರಹಾಕುವಂತೆ ಮಾಡಿದೆ. ಈ ಸಂಬಂಧ ಸೂರಪ್ಪ ಬಾಬು ಹಾಗೂ ಕಿಚ್ಚ ಸುದೀಪ್ ಕೂಡ ತಮ್ಮ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ: ಕೋಟಿಗೊಬ್ಬ-3 ಸಿನಿಮಾ ರಿಲೀಸ್ ವಿಳಂಬ- ಅಭಿಮಾನಿಗಳಲ್ಲಿ ಕಿಚ್ಚ ಕ್ಷಮೆ