ಬೆಂಗಳೂರು: ಸಂಜಯ ನಗರದ ಪೇದೆಗಳ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿದ್ದಾರೆ.
ಆರೋಪಿ ತಾಜುದ್ದೀನ್ ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದ. ಈ ಸಂಬಂಧ ಆತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ರಾತ್ರಿ ಸ್ಥಳ ಮಹಜರು ಮಾಡಲು ಕರೆದೊಯ್ದಿದ್ದರು. ಈ ವೇಳೆ ತಾಜುದ್ದೀನ್ ಪೊಲೀಸರ ಮೇಲೆ ಕಲ್ಲು ಎಸೆದು ಎಸ್ಕೇಪ್ ಆಗಲು ಯತ್ನಿಸಿದ್ದ. ಇದರಿಂದಾಗಿ ಸಂಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಾಜಿ ಅವರು ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ.
Advertisement
Advertisement
ಘಟನೆಯಲ್ಲಿ ಮಹಿಳಾ ಪಿಎಸ್‍ಐ ರೂಪಾ ಅವರ ಕೈಗೆ ಗಂಭೀರವಾಗಿ ಗಾಯವಾಗಿದೆ. ಆರೋಪಿ ಹಾಗೂ ರೂಪಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement
ನಿನ್ನೆ ಆಗಿದ್ದೇನು?
ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ದುರ್ವರ್ತನೆ ತೋರಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಚೆಕ್ ಪೊಸ್ಟ್ ನಲ್ಲಿ ಗಾಡಿ ತಪಾಸಣೆ ಮಾಡುತ್ತಿದ್ದರು. ಅಲ್ಲದೆ ಮನೆಯಿಂದ ಹೊರಗೆ ಬಂದಿದ್ದಕ್ಕೆ ಸಾರ್ವಜನಿಕರನ್ನು ಪ್ರಶ್ನೆ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಕಿಡಿಗೇಡಿಗಳು ಪೊಲೀಸರನ್ನ ನೆಲಕ್ಕೆ ತಳ್ಳಿ ಅವರ ಮೇಲೆಯೇ ಹಲ್ಲೆಗೈದಿದ್ದರು.
Advertisement
ಘಟನೆಯಿಂದಾಗಿ ಪೊಲೀಸ್ ಪೇದೆಗಳಿಗೆ ಗಾಯಗಳಾಗಿವೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ, ಪೊಲೀಸರು ಎಲ್ಲಾ ಅಪಾಯಗಳನ್ನು ಎದುರಿಸಿಕೊಂಡು ನಮಗೋಸ್ಕರ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರು ವಿಶ್ರಾಂತಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದರು.