ಬೆಂಗಳೂರು: ಬಾಡಿ ಟು ಬಾಡಿ ಮಸಾಜ್ ಹೆಸರನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಾರ್ಲರ್ ಮೇಲೆ ಸಿಸಿಬಿ ಪೊಲೀಸ್ರು ದಾಳಿ ಮಾಡಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಕೋರಮಂಗಲ ಬಳಿಯ ಈಜಿಪುರದಲ್ಲಿ ಮಸಾಜ್ ಅಂಡ್ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸ್ಪಾ ಹೆಸರಲ್ಲಿ ಗಿರಾಕಿಗಳನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದರು. ಹೆಣ್ಣುಮಕ್ಕಳಿಂದ ಬಾಡಿ ಟು ಬಾಡಿ ಮಸಾಜ್ ಹೆಸರಲ್ಲಿ ಆಕರ್ಷಕರಾಗುವಂತೆ ಮಾಡಿ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳುತ್ತಿದ್ದರು.
ಸಾಮ್ರಾಟ್ ಮತ್ತು ರಾಕೇಶ್ ಬಂಧಿತ ಆರೋಪಿಗಳು. ಕೆಲಸ ಕೊಡಿಸೋದಾಗಿ ಹೆಣ್ಣುಮಕ್ಕಳನ್ನು ಕರೆತಂದು ಹಣದ ಆಸೆ ತೋರಿಸಿ ಸೆಕ್ಸ್ ನಲ್ಲಿ ತೊಡಗಿಕೊಳ್ಳುವಂತೆ ಮಾಡುತ್ತಿದ್ದರು. ಹ್ಯಾಪಿ ಎಂಡಿಂಗ್, ಬಾಡಿ ಟು ಬಾಡಿ ಮಸಾಜ್ ಹೆಸರಲ್ಲಿ ಕಸ್ಟಮರ್‍ಗಳಿಗೆ ಆಹ್ವಾನ ನೀಡುತ್ತಿರುವುದು ರೇಡ್ ವೇಳೆ ಬಯಲಿಗೆ ಬಂದಿದೆ. ಸದ್ಯ ಆರು ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.