Connect with us

SSLC, PUC ಪರೀಕ್ಷೆ ರದ್ದತಿ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸುರೇಶ್ ಕುಮಾರ್

SSLC, PUC ಪರೀಕ್ಷೆ ರದ್ದತಿ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸುರೇಶ್ ಕುಮಾರ್

ಬೆಂಗಳೂರು: ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೋವಿಡ್ ತೀವ್ರ ಪ್ರಸರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

Advertisement
Advertisement