ಬೆಂಗಳೂರು: ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಅಶ್ವಿನ್ (27) ಮೃತ ದುರ್ದೈವಿ. ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ಕಡೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಶ್ವಿನ್ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮೂಲತಃ ಹಾವೇರಿ ಜಿಲ್ಲೆಯವರಾಗಿದ್ದಾರೆ.
Advertisement
Advertisement
ಅಶ್ವಿನ್ ತಾಯಿಗೆ ಊಟ ತರಲು ಹೊರಗಡೆ ಹೋಗಿದ್ದರು. ಎಂಎಸ್ ಪಾಳ್ಯದ ಹೋಟೆಲ್ ಒಂದರಲ್ಲಿ ಆಹಾರ ಕಟ್ಟಿಸಿಕೊಂಡು ವಾಪಸ್ ಬರುವಾಗ ಈ ಅಪಘಾತ ನಡೆದಿದೆ. ಬೀದಿದೀಪ ಸರಿಯಾಗಿ ಕಾರ್ಯ ನಿರ್ವಹಿಸದ ಕಾರಣ ಗುಂಡಿ ಇರುವುದು ಕಂಡಿರಲಿಲ್ಲ. ಇದರಿಂದಾಗಿ ಜಲಮಂಡಳಿಯವರು ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದಿದ್ದಾರೆ. ಇದನ್ನೂ ಓದಿ: ಮಲ್ಪೆ ಬಂದರಿನಲ್ಲಿ ಬಲೆಗೆ ಬಿತ್ತು 250 ಕೆ.ಜಿಯ ಗರಗಸ ಮೀನು..!
Advertisement
ಈ ಹಿನ್ನೆಲೆಯಲ್ಲಿ ಅಶ್ವಿನ್‍ಗೆ ತೀವ್ರ ಗಾಯಗೊಂಡಿದ್ದರು. ಇದನ್ನು ನೋಡಿದ ಸ್ಥಳೀಯರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ಒಂದು ಗಂಟೆಯಿಂದ ಆಂಬ್ಯುಲೆನ್ಸ್‌ಗೆ ಕಾಲ್ ಮಾಡಿದರೂ ಸ್ಥಳಕ್ಕೆ ಬಾರಲಿಲ್ಲ. ನಂತರ ಸ್ಥಳೀಯರೇ ಕಾರಿನಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಗುಂಡಿಗೆ ಬಿದ್ದು ಮೃತಪಟ್ಟ ಜಾಗದಲ್ಲಿ ಮೃತ ಅಶ್ವಿನ್ ಸ್ನೇಹಿತರು ಜಮಾಯಿಸಿ ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಘಟನೆಗೆ ಸಂಬಂಧಿಸಿ ಮೃತ ಅಶ್ವಿನ್ ಪೋಷಕರು ಯಲಹಂಕ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಬಿಬಿಎಂಪಿ, ಬಿಡ್ಲೂಎಸ್ಸ್ಬಿ ಮೇಲೆ ದೂರು ದಾಖಲಾಗಿದೆ. ಇದನ್ನೂ ಓದಿ: ಪಬ್ಲಿಕ್ ಪ್ಲೇಸ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ – ಆರೋಪಿಗಳ ಬಂಧನ
ಘಟನೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾತನಾಡಿ, ಈ ವಿಷಯದ ಬಗ್ಗೆ ಆರಂಭಿಕ ವರದಿ ಬಂದಿದೆ. ನಮ್ಮ ಅಧಿಕಾರಿಗಳ ಸ್ಥಳದಲ್ಲಿ ಮಾಹಿತಿ ಪಡೆಯುತ್ತಾ ಇದ್ದಾರೆ. ಯಾರದು ತಪ್ಪು ಆಗಿದೆಯೋ ಅದರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ರೀತಿ ಘಟನೆ ನಡೆಯಬಾರದು ಇದಕ್ಕೆ ಯಾರು ಕಾರಣ ಎಂದು ಪತ್ತೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.