ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪದವಿ ವಿದ್ಯಾರ್ಥಿನಿ ಪ್ರಭುದ್ಧ್ಯಾ (Student Prabhudhya) ನಿಗೂಢ ಸಾವು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಮಗಳದ್ದು ಆತ್ಮಹತ್ಯೆಯಲ್ಲ ಕೊಲೆ ಅಂತ ತಾಯಿ ಕೆ.ಆರ್ ಸೌಮ್ಯ ಆರೋಪಿಸಿದ್ದರು. ಅದರಂತೆ ದೂರು ಕೂಡ ದಾಖಲಿಸಿದ್ದರು. ಈ ಸಂಬಂಧ ಸುಬ್ರಮಣ್ಯಪುರ ಪೊಲೀಸರು ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೇ 15 ರಂದು 20 ವರ್ಷದ ಪ್ರಭುದ್ಧ್ಯಾ ಮೃತದೇಹ ಮನೆಯ ಬಾತ್‍ರೂಮ್‍ನಲ್ಲಿ ಪತ್ತೆ ಆಗಿತ್ತು. ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಅಂತಾ ಪೊಲೀಸರು ಪರಿಗಣಿಸಿದ್ದರು. ಮಗಳ ಸಾವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ನನ್ನ ಮಗಳದ್ದು ಆತ್ಮಹತ್ಯೆ ಅಲ್ಲ, ಕೊಲೆ- ಮೃತ ಪ್ರಭುಧ್ಯಾ ತಾಯಿ ಗಂಭೀರ ಆರೋಪ
ನನ್ನ ಮಗಳ ಕತ್ತು ಮತ್ತು ಕೈಯನ್ನ ಚಾಕುವಿನಿಂದ ಕುಯ್ದು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ. ಹೀಗಾಗಿ ನನ್ನ ಮಗಳದ್ದು ಆತ್ಮಹತ್ಯೆ ಅಲ್ಲ ಕೊಲೆ ಅಂತ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅನುಮಾನಸ್ಪದ ವ್ಯಕ್ತಿಗಳನ್ನ ವಿಚಾರಣೆ ನಡೆಸ್ತಿದ್ದಾರೆ.