ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಫೆಬ್ರವರಿ 25ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪನಗರ ರೈಲು ಸೇವೆಗೆ ಅನುಮೋದನೆ ಕೊಟ್ಟಿದ್ದ ಸರ್ಕಾರ ಈಗ ಅಧಿಕೃತ ಆದೇಶ ಹೊರಡಿಸಿದೆ.
ಸುಮಾರು 23 ಸಾವಿರ ಕೋಟಿ ರೂ. ಮೊತ್ತದ ಬೆಂಗಳೂರಿನಲ್ಲಿ 161 ಕಿ.ಮೀ ಉದ್ದದ ಉಪನಗರ ರೈಲು ಯೋಜನೆಯನ್ನು ಸದ್ಯದಲ್ಲೇ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 50:50ರ ಅನುಪಾತದಲ್ಲಿ ವೆಚ್ಚ ಭರಿಸಲಿವೆ. ಒಟ್ಟು ನಾಲ್ಕು ಕಾರಿಡಾರ್ ಗಳಲ್ಲಿ ಯೋಜನೆ ಜಾರಿಯಾಗಲಿದ್ದು, ಮೆಜೆಸ್ಟಿಕ್ ರೈಲು ನಿಲ್ದಾಣಕ್ಕೆ ಕೆಂಗೇರಿ, ವೈಟ್‍ಫೀಲ್ಡ್, ರಾಜಾನುಕುಂಟೆ, ನೆಲಮಂಗಲ, ಬೈಯಪ್ಪನಹಳ್ಳಿ, ದೇವನಹಳ್ಳಿ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲಾಗುತ್ತದೆ.
ಯೋಜನೆಯ ಮಾರ್ಗದಲ್ಲಿ ಒಟ್ಟು 80 ನಿಲ್ದಾಣಗಳು ಬರಲಿವೆ. ಇತ್ತೀಚೆಗಷ್ಟೇ ಸಿಎಂ ಕುಮಾರಸ್ವಾಮಿ ಜೊತೆ ರೈಲ್ವೇ ಸಚಿವ ಪಿಯೂಶ್ ಗೋಯಲ್ ಯೋಜನೆಯ ಶೀಘ್ರ ಜಾರಿ ಕುರಿತು ಚರ್ಚೆ ನಡೆಸಿದ್ರು. ಕೇಂದ್ರ ಸರ್ಕಾರದ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಉಪನಗರ ಯೋಜನೆಗೆ ಅನುಮೋದನೆ ನೀಡುವ ಸಿಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಉಪನಗರ ರೈಲು 70 ಕಿ.ಮೀ ಎತ್ತರಿಸಿದ ಮಾರ್ಗ ಹಾಗೂ 90 ಕಿ.ಮೀ ಸಾಮಾನ್ಯ ಮಾರ್ಗದಲ್ಲಿ ಚಾಲನೆ ಮಾಡಲಿದೆ. ಇದು ಒಟ್ಟು 23 ಸಾವಿರ ಕೋಟಿ ಮೊತ್ತದ ಕಾಮಗಾರಿಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv