ಬೆಂಗಳೂರು: ನಾಗರಬಾವಿಯಿಂದ ರಾಜಕುಮಾರ್ ಸಮಾಧಿಗೆ ಸಂಪರ್ಕ ಕಲ್ಪಿಸುವ ಸುಮ್ಮನಹಳ್ಳಿ ಬ್ರಿಡ್ಜ್ (Sumanahalli Bridge) ಮತ್ತೊಮ್ಮೆ ಕುಸಿತಗೊಂಡಿದ್ದು, ವಾಹನ ಸವಾರರ ಆತಂಕ ಹೆಚ್ಚಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ (Bengaluru) ಸುಮ್ಮನಹಳ್ಳಿ ಬ್ರಿಡ್ಜ್‌ನ ಸಿಮೆಂಟ್ ಸ್ಲ್ಯಾಬ್‍ಗಳು ಕಿತ್ತು ಬಂದಿದ್ದು, ಫ್ಲೈ ಓವರ್ ಗುಂಡಿಯಿಂದ ನೆಲ ಕಾಣಿಸುತ್ತಿದೆ. ಸದ್ಯಕ್ಕೆ ಪೊಲೀಸರು (Police) ಭದ್ರತೆಗೆ ಬಂದಿದ್ದಾರೆ. ಇನ್ನೂ ಘಟನೆ ಹಿನ್ನೆಲೆಯಲ್ಲಿ ಕಿ.ಮೀಗಟ್ಟಲೇ ಟ್ರಾಫಿಕ್ ಉಂಟಾಗುತ್ತಿದ್ದು, ಸರ್ಕಾರದ ವಿರುದ್ಧ ವಾಹನ ಸವಾರರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ-ಪಿಯು ಮಂಡಳಿ ವಿಲೀನಕ್ಕೆ ನಿರ್ಧಾರ – ಸಂಪುಟ ಸಭೆಯಲ್ಲಿ ಅನುಮೋದನೆ
Advertisement
Advertisement
ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುತ್ತಲೇ ಅಧಿಕಾರಿಗಳು ಗುಂಡಿ ಬಿದ್ದ ಜಾಗದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರು ಫ್ಲೈ ಓವರ್‌ನ್ನು ಬಂದ್ ಮಾಡಿದ್ದು, ಬದಲಿ ಮಾರ್ಗದ ವ್ಯವಸ್ಥೆಯನ್ನು ಮಾಡಿದ್ದಾರೆ. ವಾಹನ ಸಂಚಾರಕ್ಕೆ ಬದಲಿ ಮಾರ್ಗವಾಗಿ ಬ್ರಿಡ್ಜ್ ಕೆಳ ಭಾಗದ ರಸ್ತೆಯಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಇಡಿ ವಿಚಾರಣೆ ಎದುರಿಸಿದ್ದ ಡಿ.ಕೆ ಶಿವಕುಮಾರ್‌ಗೆ ಅನಾರೋಗ್ಯ
Advertisement
2019ರಲ್ಲಿಯೂ ಸ್ಲ್ಯಾಬ್ ಕುಸಿದಿತ್ತು. ಆ ಸಮಯದಲ್ಲಿ ಸುಮ್ಮನಹಳ್ಳಿ ಬ್ರಿಡ್ಜ್‌ನ್ನು 6 ತಿಂಗಳು ಬಂದ್ ಮಾಡಲಾಗಿತ್ತು. ಸ್ಲ್ಯಾಬ್ ಬಿದ್ದ ಪಕ್ಕದ ರಸ್ತೆಯಲ್ಲೇ ಪ್ರಧಾನಿ ಮೋದಿ ಭೇಟಿ ನೀಡಿದ್ದಾಗ ಗುಣಮಟ್ಟದ ಡಾಂಬರಿಕರಣ ಮಾಡಲಾಗಿತ್ತು. ಸ್ಲ್ಯಾಬ್ ಬಿದ್ದ ರಸ್ತೆಗೆ ಡಾಂಬರಿಕರಣ ಮಾಡದೇ ನಿರ್ಲಕ್ಷ್ಯ ಮಾಡಿದ್ದರು.