ಬೆಂಗಳೂರು : 25ನೇ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ (Bengaluru Tech Summit) ಇಂದು ಕನ್ನಡದ (Kannada) ಕಲರವ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿ, ಕನ್ನಡದಲ್ಲಿ ಭಾಷಣ ಶುರು ಮಾಡಿ ಬೆಂಗಳೂರನ್ನು (Bengaluru) ಹಾಡಿ ಹೊಗಳಿದರು.
ಎಲ್ಲರಿಗೂ ಕರ್ನಾಟಕಕ್ಕೆ ಸ್ವಾಗತ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ಬೆಂಗಳೂರಿಗೆ ಸ್ವಾಗತ ಎಂದು ಮಾತು ಆರಂಭಿಸಿದರು. ಬೆಂಗಳೂರು ಎಲ್ಲರನ್ನೂ ಒಳಗೊಳ್ಳುವ (ಇನ್‌ಕ್ಲೂಸಿವ್) ಮತ್ತು ನಾವೀನ್ಯತೆಯ ಸಂಸ್ಕೃತಿಯ ನಗರವಾಗಿದೆ. ಜಾಗತಿಕ ನಾವೀನ್ಯತಾ ಸೂಚ್ಯಂಕದಲ್ಲಿ ನಗರವು ಎಷ್ಟೋ ವರ್ಷಗಳಿಂದ ಪ್ರಥಮ ಸ್ಥಾನದಲ್ಲಿ ವಿರಾಜಿಸುತ್ತಿದೆ ಎಂದರು. ಇದನ್ನೂ ಓದಿ: ನಾನು ನಿನ್ನನ್ನ ಸುಮ್ಮನೆ ಬಿಡಲ್ಲ- ಶ್ರೀನಿವಾಸ್ ಪ್ರಸಾದ್‍ಗೆ ರಮೇಶ್ ತಿರುಗೇಟು
Advertisement
Advertisement
ನಮ್ಮೆಲ್ಲರ ಭವಿಷ್ಯ ಮತ್ತಷ್ಟು ವ್ಯಾಪಕವೂ ಉಜ್ವಲವೂ ಆಗಿರಲಿದೆ. ಬೆಂಗಳೂರು ಸಂಶೋಧನೆಯ ತಾಣವಾಗಿದ್ದು, ಇಲ್ಲಿ ತಂತ್ರಜ್ಞಾನ ಕ್ರಾಂತಿ ಸಂಭವಿಸುತ್ತಿದೆ ಎಂದು ಬೆಂಗಳೂರನ್ನು ಹಾಡಿ ಹೊಗಳಿದರು. ಇದನ್ನೂ ಓದಿ: ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಡೇಟಿಂಗ್ ಮಾಡಿ – ಪ್ರಮೋದ್ ಮುತಾಲಿಕ್