ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್, ಮನೆ ಮಾಲಕಿ ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಮೊಬೈಲ್‌ನಲ್ಲಿ ರಹಸ್ಯವಾಗಿ ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಈ ಘಟನೆ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಮಂಜುನಾಥ್ ಕಳೆದ ಐದು ವರ್ಷಗಳಿಂದ ಅದೇ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ. ಜುಲೈ 27ರಂದು ಮನೆ ಮಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಿಟಕಿಯ ಬಳಿ ಯಾರೋ ಮೊಬೈಲ್ ಹಿಡಿದು ನಿಂತಿರುವ ಅನುಮಾನ ಅವರಿಗೆ ಮೂಡಿತ್ತು.
ಅನುಮಾನ ಬಂದ ಬಳಿಕ ಮನೆ ಮಾಲಕಿ ಪಕ್ಕದ ಮನೆಯಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ, ಬಾಡಿಗೆದಾರ ಮಂಜುನಾಥ್ ಅಲ್ಲಿಂದ ಓಡಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನೂ ಓದಿ: ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್ ಮುನ್ನಡೆ
ತಕ್ಷಣವೇ ಮನೆ ಮಾಲಕಿ ಬೇಗೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆತನ ಮೊಬೈಲ್ ಪರಿಶೀಲಿಸಿದಾಗ, ಮನೆ ಮಾಲಕಿ ಸ್ನಾನ ಮಾಡುತ್ತಿದ್ದ ಹಲವು ವಿಡಿಯೋಗಳು ಪತ್ತೆಯಾಗಿವೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಡಿಕೇರಿಯಲ್ಲಿ ಮಳೆಯಬ್ಬರ – ಪೊನ್ನೋಲ ಸಾಸ್ಥಾವು ದೇವಾಲಯದ ಮುಂಭಾಗ ಭೂಕುಸಿತ
