ಬೆಂಗಳೂರು: ಅಪಾರ್ಟ್‌ಮೆಂಟ್‌ನ (Apartment) 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ನಿಕ್ಷೇಪ್ (26) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದು, ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅಪಾರ್ಟ್‌ಮೆಂಟ್‌ನ 16ನೇ ಮಹಡಿಗೆ ಬಂದು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗವಿಮಠ ಜಾತ್ರೆಯ ಪ್ರಸಾದದಲ್ಲಿ ವಿಶೇಷ – ಸುಮಾರು 2 ಲಕ್ಷಕ್ಕೂ ಹೆಚ್ಚು ಹಪ್ಪಳ ವಿತರಣೆ
ಘಟನೆ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಕ್ಯಾಬ್ ಬುಕ್ ಮಾಡಿ ಊರೆಲ್ಲಾ ಸುತ್ತಾಡಿದ ಮಹಿಳೆ – ಬಾಡಿಗೆ ಕೇಳಿದ್ರೆ ಲೈಂಗಿಕ ದೌರ್ಜನ್ಯ ಕೇಸ್ ಹಾಕ್ತೀನಿ ಅಂತಾ ಧಮ್ಕಿ

