ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಬೆಂಗಳೂರಿನ (Bengaluru) ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ.
ಪತಿ ಅನೂಪ್ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ. ಅನೂಪ್ ಉತ್ತರ ಪ್ರದೇಶ (Uttar Pradesh) ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ (Software Consultant) ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
Advertisement
ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸತತ 40 ಗಂಟೆ ಡಿಜಿಟಲ್ ಅರೆಸ್ಟ್ – ಕರಾಳ ಅನುಭವ ಹಂಚಿಕೊಂಡ ಖ್ಯಾತ ಯೂಟ್ಯೂಬರ್!
Advertisement
Advertisement
ಅನೂಪ್ ಮನೆಯಲ್ಲಿ ಮೂರು ಜನ ಕೆಲಸ ಮಾಡುತ್ತಿದ್ದರು. ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು.
Advertisement
ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನು ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರು. ಹೀಗಾಗಿ ಇಂದು ಬೆಳಗ್ಗೆ ಕೆಲಸವರು ಮನೆಗೆ ಬಂದಿದ್ದಾರೆ. ಭಾನುವಾರ ಸಹ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರು. ಇದನ್ನೂ ಓದಿ: ಮಾರುತಿಯ 40 ವರ್ಷದ ಓಟಕ್ಕೆ ಟಾಟಾ ಬ್ರೇಕ್ – ಪಂಚ್ ದೇಶದ ನಂ.1 ಕಾರು!
ಮೂವರು ಕೆಲಸಗಾರರ ಪೈಕಿ ಇಬ್ಬರು ಅಡುಗೆಗೆ ನಿಯೋಜನೆಗೊಂಡಿದ್ದರೆ ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಮೂವರಿಗೂ ತಿಂಗಳಿಗೆ 15 ಸಾವಿರ ರೂ. ಸಂಬಳ ನೀಡುತ್ತಿದ್ದರು. ಟೆಕ್ಕಿ ಕುಟುಂಬ ಆರ್ಥಿಕವಾಗಿ ಸದೃಢವಾಗಿತ್ತು.
ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿದ್ದಾರೆ.
ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವಿಧಿ ವಿಜ್ಞಾನ ಪ್ರಾಯೋಗಾಲಯದ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಯಾಕೆ ಆತ್ಮಹತ್ಯೆಗೆ ಶರಣಾದರು ಎನ್ನುವುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದರು.