ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು (BJP_JDS) ಮೈಸೂರು ಚಲೋ (Mysuru Chalo) ಆರಂಭಿಸಿದ್ದಾರೆ.
ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಇದನ್ನೂ ಓದಿ: ಮುಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಿಎಸ್‌ವೈ
Advertisement
Advertisement
ಹೆಚ್‌ಡಿಕೆ ಮಾತನಾಡಿ, ಇದು ಜನವಿರೋಧಿ ಸರ್ಕಾರವಾಗಿದ್ದು ಮುಡಾ, ವಾಲ್ಮೀಕಿ ಪ್ರಕರಣ ಬಯಲಿಗೆ ಬಂದಿದೆ. ಜನರ ಆಸ್ತಿಗಳನ್ನು ನುಂಗಿದ ಸರ್ಕಾರದ ವಿರುದ್ಧ ನಾವು ಜನಾಂದೋಲನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
Advertisement
ದೇವೇಗೌಡರ ಕುಟುಂಬದಿಂದ ನೈಸ್ ಸುತ್ತಮುತ್ತ ಅಕ್ರಮ ಆಸ್ತಿ ಎಂಬ ಡಿಕೆ ಶಿವಕುಮಾರ್ (DK Shivakumar) ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಅವರ ಕೈಯಲ್ಲೇ ಇದೆ. ನಾವು ಅಕ್ರಮವಾಗಿ ಆಸ್ತಿ ಮಾಡಿದರೆ ಸರ್ಕಾರ ವಶಪಡಿಸಿಕೊಳ್ಳಲಿ. ಸರ್ಕಾರ ಅವರದ್ದೇ ಇದೆ, ಮುಟ್ಟುಗೋಲು ಹಾಕಿಕೊಳ್ಳಲಿ. ನಾವು ನ್ಯಾಯ ಬದ್ಧವಾಗಿ ಬದುಕಿದ್ದೇವೆ, ಇವರ ಥರ ಬದುಕಿಲ್ಲ. ಶಿವಕುಮಾರ್ ಬಿಡದಿಯಲ್ಲಿ ಆರೋಪ ಮಾಡಿದ್ದಾರೆ. ಅವರಿಗೆ ನಾನು ಬಿಡದಿಯಲ್ಲೇ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದರು.
Advertisement
ಇಂದಿನಿಂದ ಆಗಸ್ಟ್ 10 ರವರೆಗೆ ಏಳು ದಿನಗಳ ಕಾಲ ಒಟ್ಟು 124 ಕಿಮೀವರೆಗೆ ಪಾದಯಾತ್ರೆ ನಡೆದು ಮುಡಾ ಕಚೇರಿಯಲ್ಲಿ ಕೊನೆಯಾಗಲಿದೆ. ಕೊನೆಯ ದಿನದಂದು ಮೈಸೂರಿನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಥವಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.
ಮೈತ್ರಿ ಪಾದಯಾತ್ರೆಯ ಹಾದಿ
* ಆ.3 – ಕೆಂಗೇರಿಯಲ್ಲಿ ಆರಂಭ. ಬಿಡದಿಯಲ್ಲಿ ವಾಸ್ತವ್ಯ
* ಆ.4 – ಬಿಡದಿಯಲ್ಲಿ ಆರಂಭ. ಕೆಂಗಲ್‌ನಲ್ಲಿ ವಾಸ್ತವ್ಯ
* ಆ.5 – ಕೆಂಗಲ್‌ನಲ್ಲಿ ಆರಂಭ. ನಿಡಘಟ್ಟದಲ್ಲಿ ವಾಸ್ತವ್ಯ
* ಆ.6 – ನಿಡಘಟ್ಟದಲ್ಲಿ ಆರಂಭ. ಮಂಡ್ಯದಲ್ಲಿ ವಾಸ್ತವ್ಯ
* ಆ.7 – ಮಂಡ್ಯದಲ್ಲಿ ಆರಂಭ. ತೂಬಿನಕೆರೆಯಲ್ಲಿ ವಾಸ್ತವ್ಯ
* ಆ.8 – ತೂಬಿನಕೆರೆಯಲ್ಲಿ ಆರಂಭ. ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯ
* ಆ.9 – ಶ್ರೀರಂಗಪಟ್ಟಣದಲ್ಲಿ ಆರಂಭ. ಮೈಸೂರು ಹೊರವಲಯದಲ್ಲಿ ವಾಸ್ತವ್ಯ
* ಆ.10 – ಮೈಸೂರು ಹೊರವಲಯದಲ್ಲಿ ಆರಂಭ. ವೇದಿಕೆಯಲ್ಲಿ ಅಂತ್ಯ