ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು (Bus) ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಕಳಸ (Kalasa) ತಾಲೂಕಿನ ಕಲ್ಮಕ್ಕಿ-ಕಂಚಿಗಾನೆ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ (Bengaluru) ಹೊರನಾಡಿಗೆ (Horanadu) ಪ್ರವಾಸಕ್ಕೆಂದು ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಅಪಘಾತದ ತೀವ್ರತೆಗೆ ಇಬ್ಬರು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಹಲವು ಪ್ರವಾಸಿಗರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಸರ್ಕಾರಿ ನೌಕರರು ಮುಜುಗರದ ಡ್ರೆಸ್ ಧರಿಸುವಂತಿಲ್ಲ; ಸಭ್ಯ ಉಡುಪು ಧರಿಸುವಂತೆ ಸರ್ಕಾರ ಆದೇಶ

ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ರಸ್ತೆಗಳು ತಿರುವಿನಿಂದ ಕೂಡಿದ್ದು ಪ್ರವಾಸಿ ವಾಹನಗಳು ಎಚ್ಚರಿಕೆಯಿಂದ ಚಾಲನೆ ಮಾಡಬೇಕಿದೆ. ಇದನ್ನೂ ಓದಿ: ಕೋಳಿ ಅಂಕ ನಿಲ್ಲಬಾರದು – ಅರೆಸ್ಟ್ ಮಾಡೋದಾದ್ರೆ ಮೊದಲು ನನ್ನನ್ನೇ ಬಂಧಿಸಿ: ಶಾಸಕ ಅಶೋಕ್ ರೈ

