ಬೆಂಗಳೂರು: ದೇಶಾದ್ಯಂತ ನೂತನ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿದ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ, ಭಾರೀ ಪ್ರಾಮಾಣದ ದಂಡ ಕಟ್ಟಿ ಸುತ್ತಾಗಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನದವರೆಗೆ ಒಂದೇ ದಿನದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ 2,978 ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಗಳಿಂದ ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ಭರ್ತಿ 30 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ನಿಯಮ ಉಲ್ಲಂಘಿಸಿದವರ ಬಳಿ ಭಾರೀ ದಂಡ ಕಟ್ಟಿಸಿಕೊಂಡು ಪೊಲೀಸರು ವಾಹನ ಸವಾರರ ಬೆವರಿಳಿಸಿದ್ದಾರೆ.
Advertisement
Advertisement
ಇದರ ನಡುವೆ, ದುಬಾರಿ ದಂಡ ತಪ್ಪಿಸಿಕೊಳ್ಳಲು ದೇಸೀ ಉಪಾಯಕ್ಕೆ ಪೊಲೀಸರೇ ಬೇಸ್ತು ಬಿದ್ದಿದ್ದಾರೆ. ಗುರುಗ್ರಾಮದಲ್ಲಿ ಬೈಕ್ ಸವಾರರು ಪೊಲೀಸರ ಪರಿಶೀಲನೆ ಕಂಡು ಬೈಕ್‍ಗಳನ್ನು ತಳ್ಳಿಕೊಂಡು ಹೋಗುತ್ತಿದ್ದಾರೆ. ಈ ಕುರಿತ ಹಾಸ್ಯಾತ್ಮಕ ವಿಡಿಯೋವೊಂದನ್ನು ಗುರುಗ್ರಾಮದ ಐಪಿಎಸ್ ಅಧಿಕಾರಿ ಪಂಕಜ್ ನೈನ್ ಶೇರ್ ಮಾಡಿಕೊಂಡಿದ್ದಾರೆ.
Advertisement
This is hilarious.
Innovative ways to avoid traffic challans
☺️☺️
Pls follow traffic rules to avoid such situations #MotorVehiclesAct2019 pic.twitter.com/hh7c1jWC80
— Pankaj Nain IPS (@ipspankajnain) September 3, 2019