– ಠಾಣೆಯಲ್ಲೇ ಸಿಬ್ಬಂದಿಯ ಯೋಗಾಭ್ಯಾಸ
ಬೆಂಗಳೂರು: ಟ್ರಾಫಿಕ್ ಕ್ಲಿಯರ್ ಮಾಡಿ ರೋಸಿಹೋಗಿರುವ ಸಿಲಿಕಾನ್ ಸಿಟಿ ಸಂಚಾರಿ ಪೊಲೀಸರು ರಿಲ್ಯಾಕ್ಸ್ ಆಗಲು ಪ್ರತಿದಿನ ಬೆಳಗ್ಗೆ ಠಾಣೆಯಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಾರೆ.
ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರತಿದಿನ ಯೋಗ ಮಾಡುತ್ತಿದ್ದಾರೆ. ಖ್ಯಾತ ಯೋಗತಜ್ಞ ರಾಮಕೃಷ್ಣ ಅವರಿಂದ ಸಿಬ್ಬಂದಿಗೆ ಯೋಗ ತರಬೇತಿ ನೀಡಲಾಗುತ್ತಿದೆ. ಕೆಲಸದಿಂದ ದೇಹದ ಮೇಲಾಗುವ ಒತ್ತಡ ಕಡಿಮೆ ಮಾಡಲು ಬನಶಂಕರಿ ಸಂಚಾರಿ ಠಾಣೆ ಇನ್ಸ್‍ಪೆಕ್ಟರ್ ಕೃಷ್ಣ ನೇತೃತ್ವದಲ್ಲಿ ಯೋಗಾಭ್ಯಾಸ ಮಾಡಲಾಗುತ್ತಿದೆ.
Advertisement
Advertisement
45 ದಿನಗಳ ಕಾಲ ಬನಶಂಕರಿ ಸಂಚಾರಿ ಠಾಣೆಯಲ್ಲೇ ಯೋಗಾಭ್ಯಾಸ ಮಾಡಲಾಗುತ್ತದೆ. ಇದರ ಜೊತೆಗೆ ಪಿಸಿಯೋಥೆರಪಿ ಮೂಲಕ ಸಿಬ್ಬಂದಿಗೆ ಬಾಡಿ ಮಸಾಜ್ ಕೂಡ ಮಾಡಲಾಗುತ್ತಿದೆ. ಟ್ರಾಫಿಕ್ ಕ್ಲೀಯರ್ ಮಾಡಲು ನಿಂತು ಸಿಬ್ಬಂದಿಗೆ ತೀವ್ರ ಕಾಲು ನೋವು ಕಾಣಿಸಿಕೊಳ್ಳುತ್ತದೆ. ಹೀಗಾಗಿ ಪ್ರತಿನಿತ್ಯ ನುರಿತ ವೈದ್ಯರಿಂದ ಸಿಬ್ಬಂದಿಗೆ ಪಿಸಿಯೋಥೆರಪಿ ಮಾಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.