ಬೆಂಗಳೂರು: ಇಂದು ಸಂಜೆ ಖೇಲೋ ಇಂಡಿಯಾ ಸಮಾರೋಪ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆಯಿದೆ.
ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಸಚಿವರು ಹಾಗೂ ವಿವಿಧ ರಾಜ್ಯದ ಗಣ್ಯರು ಭಾಗವಹಿಸುವ ಹಿನ್ನೆಲೆ ಕಂಠೀರವ ಸ್ಟೇಡಿಯಂ ಸುತ್ತಮುತ್ತ ಇರುವ ರಸ್ತೆಯ ಬದಲು ಪರ್ಯಾಯ ರಸ್ತೆಯನ್ನು ಬಳಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಿನ್ನಿಂದ್ಲೇ ಎಲ್ಲಾ ಆಗಿದ್ದು ನಿನ್ನಿಂದ ಅಪ್ಪ ಜೈಲಿಗೆ ಹೋಗಿದ್ದು – ದಿವ್ಯಾ ಹಾಗರಗಿಯನ್ನು ತರಾಟೆಗೆ ತೆಗೆದುಕೊಂಡ ಪುತ್ರ
Advertisement
— Kala Krishnaswamy, IPS DCP Traffic East (@DCPTrEastBCP) May 2, 2022
Advertisement
ವಾಹನ ನಿಲುಗಡೆ ನಿಷೇಧ:
ಇಂದು ಬೆಳಗ್ಗೆ 6 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಸ್ತೂರ್ಬಾ ರಸ್ತೆ, ಹಡ್ಸನ್ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್‍ವರೆಗೆ, ಆರ್.ಆರ್.ಎಂ.ಆರ್. ರಸ್ತೆ, ಆರ್.ಆರ್.ಎಂ.ಆರ್. ಜಂಕ್ಷನ್ ನಿಂದ ಹಡ್ಸನ್ ವೃತ್ತದವರೆಗೆ, ಎನ್.ಆರ್. ರಸ್ತೆ, ಕೆ.ಜಿ.ರಸ್ತೆ, ನೃಪತುಂಗ ರಸ್ತೆ, ಹಳೇ ಅಂಚೆ ಕಛೇರಿ ರಸ್ತೆ, ಬಿ.ಆರ್.ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ದೇವರಾಜ್ ಅರಸ್ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಟಿ.ಚೌಡಯ್ಯ ರಸ್ತೆ, ಟೆಂಪಲ್ ಸ್ಟ್ರೀಟ್ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.