ಬೆಂಗಳೂರು: ಬೆಂಗಳೂರಿನಲ್ಲಿಂದು ಸಾರಿಗೆ ನೌಕರರ ಪ್ರತಿಭಟನೆಯ ಕೂಗು ಜೋರಾಗಿತ್ತು.
ನಗರದ ಟೌನ್ ಹಾಲ್ ಮುಂಭಾಗ ಜಮಾಯಿಸಿದ 500ಕ್ಕೂ ಹೆಚ್ಚು ನೌಕರರು, ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ರದ್ದು ಮಾಡಿ, ಅಂತರ ನಿಗಮ ವರ್ಗಾವಣೆ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿದರು.
Advertisement
Advertisement
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರಗಳ ಒಕ್ಕೂಟದ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ನೌಕರರ ಕುಟುಂಬದವರು ಅದರಲ್ಲೂ ಪುಟ್ಟ ಪುಟ್ಟ ಮಕ್ಕಳು ಸುಡು ಬಿಸಿಲನ್ನು ಲೆಕ್ಕಿಸದೇ ಧರಣಿ ನಡೆಸಿದ್ದು, ಎಲ್ಲರ ಮನ ಕಲಕುವಂತಿತ್ತು.