ಬೆಂಗಳೂರು: ಹೃದಯದ ಭಾವನೆಗಳ ಇನ್ನೊಂದು ರೂಪವೇ ಭಾಷೆ. ಭಾಷೆಗೆ ಸೆಳೆಯುವಂತಹ ಶಕ್ತಿ ಇದೆ. ತುಳುನಾಡಿನವರಿಗೆ ಎರಡು ಭಾಷೆ ಇದೆ. ಕನ್ನಡ (Kannada) ರಾಜ್ಯ ಭಾಷೆಯಾದ್ರೆ, ತುಳು (Tulu) ಮಾತೃಭಾಷೆಯಾಗಿದೆ. ಈ ಎರಡು ಭಾಷೆಗಳನ್ನು ಉಳಿಸುವ ಮತ್ತು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ (Shree Gurudevananda Swamiji Odiyoor) ಅವರು ಹೇಳಿದ್ದಾರೆ.
ಬೆಂಗಳೂರಿನ ತುಳುವೆರೆ ಚಾವಡಿ 25ನೇ ವರ್ಷದ ʼಬೊಳ್ಳಿ ಪರ್ಬʼ ಕಾರ್ಯಕ್ರಮದಲ್ಲಿ ತುಳುನಾಡ್ದ್ ಸಿರಿ ಪ್ರಶಸ್ತಿ ಮತ್ತು ಜೋಕುಲೆ ಉಜ್ಜಾಲ್ ತುಳು ಪದಮಾಲೆ ಪುಸ್ತಕ ಹಾಗೂ ಸತ್ಯಪ್ಪೆ ಬಾಲೆಲು ಆಡಿಯೋ ಬಿಡುಗಡೆ ಮಾಡಿ ಮಾತನಾಡಿದ ಅವರು, ತುಳುಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸುವ ವಿಚಾರ ಕೂಡ ಹೋರಾಟದ ಹಾದಿಯಲ್ಲಿದೆ. ಆದರೆ ಅದಕ್ಕಿಂತ ಮುನ್ನ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸಬೇಕು. ಈಗಾಗಲೇ ಸರ್ಕಾರ ಈ ಬಗ್ಗೆ ಅಧ್ಯಯನ ಸಮಿತಿಯನ್ನು ರಚಿಸಿದ್ದು, ಇದು ಆದಷ್ಟು ಬೇಗ ಜಾರಿಯಾಗಲು ತುಳುನಾಡಿನವರು ಎಲ್ಲರೂ ಒಗ್ಗಟ್ಟಿನಿಂದಿರಬೇಕು ಎಂದು ಹೇಳಿದರು.
Advertisement
Advertisement
ಇನ್ನು ನಮ್ಮ ಮಾತೃಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು. ಕರಾವಳಿಯ ಜನರಲ್ಲಿ ನಾಯಕತ್ವದ ಗುಣವಿದೆ. ಸದಾ ಕ್ರೀಯಾಶೀಲತೆಯಿಂದ ಇರುವ ಜನ ಆತ್ಮವಿಶ್ವಾಸದಿಂದ ಇರುತ್ತಾರೆ. ಹಾಗೇ ತುಳುಭಾಷೆ ಜಾತಿ ಧರ್ಮವನ್ನು ಮೀರಿ ನಿಂತಿದೆ ಎಂದು ತುಳುಭಾಷೆಯಲ್ಲಿ ಅಡಗಿರುವ ಶಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
Advertisement
ರಾಜ್ಯ ಸರ್ಕಾರ ಈಗಾಗಲೇ ತುಳು ಭಾಷೆಯನ್ನು ಎರಡನೇ ಭಾಷೆಯನ್ನಾಗಿಸಲು ಅಧ್ಯಯನ ಸಮಿತಿಯನ್ನು ರಚಿಸಿದೆ. ಹಾಗೇ ತುಳು ಭಾಷೆಯ ಲಿಪಿಯೂ ಸರಿಯಾಗಬೇಕು. ಜೊತೆಗೆ ಶಾಲೆಗಳಲ್ಲಿ ತುಳು ಭಾಷೆಯನ್ನು ನಾಲ್ಕನೇ ತರಗತಿಯವರೆಗೆ ಆಯ್ಕೆಯ ಭಾಷೆಯನ್ನಾಗಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: SSLC ಪೂರ್ವಸಿದ್ಧತಾ ಪರೀಕ್ಷೆಗೂ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕು – ಶಿಕ್ಷಣ ಇಲಾಖೆಯಿಂದ ಹೊಸ ನಿಯಮ
Advertisement
ಇದೇ ವೇಳೆ, ಖ್ಯಾತ ಯಕ್ಷಗಾನ ಕಲಾವಿದರಾದ ಸೀತಾರಾಮ ಕುಮಾರ್ ಕಟೀಲ್, ಹಿರಿಯ ತುಳು ಸಾಹಿತಿ ಕುಶಲಾಕ್ಷಿ ವಿ.ಕಣ್ವತೀರ್ಥ, ಸಮಾಜ ಸೇವಕ ರವಿ ಕಟಪಾಡಿ, ಪ್ರಕಾಶ್ ಜೆ ಶೆಟ್ಟಿಗಾರ್ ಇವರಿಗೆ ತುಳುನಾಡ್ದ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ಹಿರಿಯ ತುಳು -ಕನ್ನಡ ಸಾಹಿತಿ ಡಿ.ಕೆ.ಚೌಟ ಇವರ ಸಂಸ್ಮರರ್ಣಾಥವಾಗಿ ಹಿರಿಯ ತುಳು ಸಾಹಿತಿ ಉಗಪ್ಪ ಪೂಜಾರಿಯವರಿಗೆ ಪ್ರಶಸ್ತಿ ಮತ್ತು ಸಾಮಾಜಿಕ ಚಿಂತಕ ,ತುಳು ಹೊರಾಟಗಾರ ಡಾ.ಉದಯ ಧರ್ಮಸ್ಥಳ ಇವರ ಸಂಸ್ಮರರ್ಣಾಥವಾಗಿ ತುಳು ಸೇವೆಗಾಗಿ ಯುವ ಪ್ರತಿಭೆ ಸತೀಶ್ ಅಗ್ಪಲ್ ರವರಿಗೆ ಪ್ರಶಸ್ತಿ ನೀಡಲಾಯ್ತು. ವಿಶೇಷ ಚೇತನರಾದ ಉಲ್ಲಾಸ್ ಯು ನಾಯಕ್, ಲಿಖಿತ ಮತ್ತು ಶ್ರಾವ್ಯ ಅವರಿಗೆ ಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ತುಳುವೆರೆ ಚಾವಡಿ ಸಂಘದ ಅಧ್ಯಕ್ಷ ಪುರುಷೋತ್ತಮ್ ಚೇಂಡ್ಲಾ, ಉಮೇಶ್ ಪೂಂಜಾ, ವಸಂತ್ ಶೆಟ್ಟಿ ಬೆಳ್ಳಾರೆ, ಪ್ರೋ. ರಾಧಾಕೃಷ್ಣ ಸೇರಿದಂತೆ ಕಾರ್ಯಕ್ರಮದಲ್ಲಿ ತುಳುವೆರೆ ಚಾವಡಿ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗಿಯಾಗಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k