ಬೆಂಗಳೂರು: ನೆಲಮಂಗಲ-ತುಮಕೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು 10 ಪಥದ ಹೆದ್ದಾರಿಯನ್ನಾಗಿ (10 Lane Highway) ವಿಸ್ತರಿಸುವ ಯೋಜನೆಯ ಮೊದಲ ಹಂತದ ಕಾಮಗಾರಿ ನಡೆಯುತ್ತಿದ್ದು, ಇದು 2025ರ ಆಗಸ್ಟ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಸುಮಾರು 844 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು-ತುಮಕೂರು (Bengaluru-Tumakuru) ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, 44.04 ಕಿ.ಮೀ ದೂರದ ಹೆದ್ದಾರಿ 3 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ರಾಜ್ಯಸಭಾ ಅಧಿವೇಶನದಲ್ಲಿ ಮಾತನಾಡಿದ ಗಡ್ಕರಿ, ರಾಷ್ಟ್ರೀಯ ಹೆದ್ದಾರಿ 48ರ 29.5 ಕಿ.ಮೀ ನಿಂದ 75 ಕಿ.ಮೀ ವರೆಗಿನ ತುಮಕೂರು ಬೈಪಾಸ್ ಸೇರಿದಂತೆ ನೆಲಮಂಗಲದಿಂದ ತುಮಕೂರು ಭಾಗದ 6 ಪಥಗಳನ್ನು 2 ಹಂತಗಳಾಗಿ ವಿಂಗಡಿಸಲಾಗಿದೆ. ಮೊದಲನೆಯ ಹಂತ ಸರ್ವಿಸ್ ರಸ್ತೆಗಳ ನಿರ್ಮಾಣವಾಗಿದ್ದು, 2ನೇ ಹಂತ ಮುಖ್ಯ ಕ್ಯಾರೇಜ್‌ವೇ ನಿರ್ಮಾಣವಾಗಿದೆ. ಮೊದಲ ಹಂತದಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. 2025 ಆಗಸ್ಟ್ 24 ಒಳಗಡೆ ಈ ಯೋಜನೆ ಪೂರ್ಣಗೊಳ್ಳುವಂತೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮೂರು ವಿಷಯಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಲಿದ್ದಾರೆ ಸಿಎಂ
ಭಾರತಮಾಲಾ ಯೋಜನೆಯಡಿ ಕೈಗೆತ್ತಿಕೊಂಡಿರುವ ಹಸಿರು ಹೆದ್ದಾರಿ ಯೋಜನೆಯು ರೈಲ್ವೇ ಮೇಲ್ಸೇತುವೆಗಳು ಸೇರಿದಂತೆ 17 ಮೇಲ್ಸೇತುವೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಆರು-ಪಥದ ಎಕ್ಸ್‌ಪ್ರೆಸ್‌ವೇ ಮತ್ತು ಎರಡೂ ಬದಿಯಲ್ಲಿ ನಾಲ್ಕು-ಲೇನ್ ಸರ್ವಿಸ್ ರಸ್ತೆ ಇರಲಿದೆ. ಇದನ್ನೂ ಓದಿ: ಜಲೀಲ್ ಹತ್ಯೆ ಕೇಸ್ – ಇಬ್ಬರು ಮಹಿಳೆಯರ ವಿಚಾರಣೆ, ಗಾಂಜಾ ಮಾಫಿಯಾದ ವಾಸನೆ