Connect with us

Bengaluru Rural

ಕ್ಷಣಾರ್ಧದಲ್ಲಿ ಬೆಂಕಿಗೆ ಆಹುತಿಯಾದ ಐಶಾರಾಮಿ ಕಾರು

Published

on

ನೆಲಮಂಗಲ: ಐಶಾರಾಮಿ ಬಿಎಂಡಬ್ಲ್ಯೂ ಕಾರು ನೋಡ ನೋಡುತ್ತಿದ್ದಂತೆ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ಹೊರವಲಯ ದಾಸರಹಳ್ಳಿ ಸಮೀಪದ 8ನೇ ಮೈಲಿಯ ಬಳಿ ನಡೆದಿದೆ.

ದಾಸರಹಳ್ಳಿ ಸಮೀಪದ 8ನೇ ಮೈಲಿಯ ರಸ್ತೆ ಬದಿಯಲ್ಲಿ ದೆಹಲಿ ನೋಂದಣಿ ನಂಬರ್‍ನ ಬಿಎಂಡಬ್ಲ್ಯೂ ಕಾರನ್ನು ನಿಲ್ಲಿಸಲಾಗಿತ್ತು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಕ್ಷಣಾರ್ಧದಲ್ಲಿ ಪಾರಾಗಿದ್ದಾರೆ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡುತ್ತಿದ್ದಂತೆ ಸಮೀಪದಲ್ಲಿದ್ದ ಜನರು ಆತಂಕದಿಂದ ಓಡಿಹೋಗಿದ್ದಾರೆ. ಈ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೀಣ್ಯ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದೆ.

ಈ ಘಟನೆಯಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *