ಬೆಂಗಳೂರು: ನೃಪತುಂಗ ರಸ್ತೆಯಲ್ಲಿರುವ ಸೆಂಟ್ ಮಾರ್ಥಾಸ್ ಆಸ್ಪತ್ರೆ ಮುಂಭಾಗದಲ್ಲಿ ದೊಡ್ಡಮಟ್ಟದಲ್ಲಿ ಮೇಲ್ಫಾವಣಿ ನಿರ್ಮಿಸಲಾಗುತ್ತಿತ್ತು. ಎಂದಿನಂತೆ ರಾಯಚೂರು ಮೂಲಕ ಐವರು ಕಾರ್ಮಿಕರು ಬೆಳ್ಳಂಬೆಳಗ್ಗೆ 6 ಗಂಟೆ ಸಮಯದಲ್ಲಿ ಮೇಲ್ಫಾವಣಿಯಲ್ಲಿ ರೂಫಿಂಗ್ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಮೇಲ್ಫಾವಣಿ ಕುಸಿದು ಐವರು ಕಾರ್ಮಿಕರ ಮೇಲೆ ಬಿದ್ದಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಶುರುಮಾಡಿದ್ರು.
ಮೊದಲು ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ರಕ್ಷಣೆ ಮಾಡಿದ್ರು. ರಫೀಕ್ ಸಾಬ್ ಮತ್ತು ಬಸವರಾಜು ಅನ್ನೋ ಕಾರ್ಮಿಕರು, ಛಾವಣಿಯ ಸ್ಲಾಬ್ ಕೆಳಗೆ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ರು. ತಕ್ಷಣ ಅಲರ್ಟ್ ಆದ ಪೊಲೀಸರು, ಜೆಸಿಬಿ ಮತ್ತು ಕ್ರೌನ್ ಗಳ ಮೂಲಕ ಸುಮಾರು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಇಬ್ಬರು ಕಾರ್ಮಿಕರನ್ನು ರಕ್ಷಿಸಿದ್ರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾರ್ಮಿಕ ಬಸವರಾಜ್ ಕೊನೆಯುಸಿರೆಳೆದಿದ್ದಾರೆ. ಮತ್ತೊಬ್ಬ ಕಾರ್ಮಿಕ ರಫೀಕ್ ಸಾಬ್ ಸಾವು-ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ. ಇಲ್ಲಿ ಕೆಲಸ ಮಾಡ್ತಿದ್ದ ಎಲ್ಲರು ರಾಯಚೂರು ಮೂಲದ ಮಸ್ಕಿ ತಾಲೂಕಿನ ಮೂಲದವರಾಗಿದ್ದು, ಎಲ್ಲರಿಗೂ ಆಸ್ಪತ್ರೆ ವತಿಯಿಂದ ಉಚಿತವಾಗಿ ಚಿಕಿತ್ಸೆ ಕೊಡಿಸುವುದಾಗಿ ಆಸ್ಪತ್ರೆಯವರು ಭರವಸೆ ನೀಡಿದ್ದಾರೆ.
ಈ ದುರಂತಕ್ಕೆ ಅವೈಜ್ಞಾನಿಕ ಪ್ಲಾನಿಂಗ್ ಮತ್ತು ಕಳಪೆ ಕಾಮಗಾರಿ ಅಂತಾ ಶಂಕಿಸಲಾಗಿದ್ದು ಎಂಜಿನಿಯರ್, ಕಂಟ್ರಾಕ್ಟರ್ ಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಆದ್ರೆ ಕೂಲಿ ಅರಸಿ ದೂರದ ಹಳ್ಳಿಗಳಿಂದ ನಗರಕ್ಕೆ ಬರೋ ಇಂತಹ ಕಾರ್ಮಿಕರು, ಮೇಲಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾಗ್ತಿರೋದು ಮಾತ್ರ ದುರಂತ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಜೆಡಿಎಸ್‍ಗೆ ಸಿದ್ದರಾಮಯ್ಯ ಚೆಕ್ – ಬಿಜೆಪಿಗೆ ಕುದುರುತ್ತಾ ಲಕ್?