Bengaluru CityCrimeDistrictsKarnatakaLatestLeading NewsMain Post

ಬಸ್ ಹತ್ತುವಾಗ ಬಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ- ಜ್ಞಾನಭಾರತಿ ಆವರಣದಲ್ಲಿ ಉದ್ವಿಗ್ನ ಸ್ಥಿತಿ

ಬೆಂಗಳೂರು: ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ (BMTC Bus) ಹರಿದಿದ್ದು, ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದೆ.

ಕೋಲಾರ ಮೂಲದ ಶಿಲ್ಪಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಈಕೆ ಮೊದಲ ವರ್ಷದ ಪಿಜಿ ವ್ಯಾಸಂಗ ಮಾಡುತ್ತಿದ್ದಾಳೆ. ಶಿಲ್ಪಾ ಬಸ್ ಹತ್ತುತ್ತಿದ್ದಂತೆಯೇ ಚಾಲಕ ಮುಂದಕ್ಕೆ ಮೂವ್ ಮಾಡಿದ್ದಾನೆ. ಪರಿಣಾಮ ಕೆಳಗೆ ಬಿದ್ದ ಶಿಲ್ಪಾಳ ಮೇಲೆ ಬಸ್ ಹರಿದು ಗಂಭೀರ ಗಾಯಗೊಂಡಿದ್ದಾಳೆ. ಸದ್ಯ ಗಾಯಗೊಂಡ ಶಿಲ್ಪಾಳನ್ನು ಸ್ಥಳೀಯ ಪೊಲೀಸರು ಹತ್ತಿರದ ಅಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಟೈರ್ ಬ್ಲಾಸ್ಟ್ ಆಗಿ ಬಸ್ ಪಲ್ಟಿ- ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

ಇತ್ತ ಅಪಘಾತ ಪ್ರಕರಣ ಸಂಬಂಧಿಸಿದಂತೆ ಯೂನಿವರ್ಸಿಟಿ ಒಳಗೆ ವಾಹನ ಬಿಡದಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಯೂನಿವರ್ಸಿಟಿಯ ಎಲ್ಲಾ ಗೇಟ್ ಗಳನ್ನು ಬೀಗ ಹಾಕಿ ಧರಣಿ ನಡೆಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್ ಆರ್ ಪಿ ವಾಹನ ಆಗಮಿಸಿದೆ. ಸ್ಥಳಕ್ಕಾಗಮಿಸಿದ ಬಿಎಂಟಿಸಿ ಪಶ್ಚಿಮ ವಲಯದ ಡಿಸಿ ಶ್ರೀನಾಥ್, ಯುವತಿಯ ಚಿಕಿತ್ಸಾ ವೆಚ್ಚ ಭರಿಸೋದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಯುವತಿಯನ್ನ ಈಗಾಗ್ಲೇ ಪೋರ್ಟಿಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮೂರ್ನಾಲ್ಕು ಸರ್ಜರಿ ಮಾಡಬೇಕು ಅಂತ ಹೇಳಿದ್ದಾರೆ. ಎಲ್ಲಾ ಚಿಕಿತ್ಸಾ ವೆಚ್ಚ ಭರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಬಿಬಿಎಂಪಿ (BBMP), ಅರಣ್ಯ, ಪೊಲೀಸ್ ಇಲಾಖೆ, ವಿದ್ಯಾರ್ಥಿಗಳ (Students) ಸೇರಿ ಸಮಿತಿ ರಚನೆ ಮಾಡಲಾಗುವುದು. ಉನ್ನತ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ಮಾಡಲಾಗುವುದು. ತಕ್ಷಣಕ್ಕೆ ಸಭೆ ಕರೆದು ಸಾರ್ವಜನಿಕ ವಾಹನ ನಿಷಿದ್ಧದ ಬಗ್ಗೆ ತೀರ್ಮಾನ ಮಾಡಲಾಗುವುದು. ಬಿಎಂಟಿಸಿ ವತಿಯಿಂದ ವಿದ್ಯಾರ್ಥಿನಿ ಚಿಕಿತ್ಸೆ ವೆಚ್ಚ ನೀಡಲಾಗುವುದು. ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಹೆಸರಲ್ಲಿ 5 ಲಕ್ಷ ಫಿಕ್ಸ್ ಡ್ ಠೇವಣಿ ಇಡಲು ನಿರ್ಧಾರ ಮಾಡಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತರು ಹೇಳಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button