ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ನಗರದ (Bengaluru) ಜನತೆಗೆ ಮಳೆರಾಯ (Rain) ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ.
ನಗರದ ವಸಂತಪುರ, ಕುಮಾರಸ್ವಾಮಿ ಲೇಔಟ್, ವಿಜಯನಗರ, ಟಿನ್ ಫ್ಯಾಕ್ಟರಿ, ಕೆ.ಆರ್‌ಪುರಂ, ವೈಟ್ ಫೀಲ್ಡ್, ಕಲ್ಯಾಣ ನಗರ ಸೇರಿದಂತೆ ಪೂರ್ವ ವಲಯ ಹಾಗೂ ನಗರದ ದಕ್ಷಿಣ ಭಾಗಗಳ ಹಲವೆಡೆ ಸುತ್ತಮುತ್ತ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದೆ. ನಗರದ ಇನ್ನೂ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು ಮಳೆಯ ಸೂಚನೆ ಇದೆ. ಕಳೆದ ಮೂರರಿಂದ ನಾಲ್ಕು ತಿಂಗಳ ಬಳಿಕ ಬೆಂಗಳೂರಿನಲ್ಲಿ ಮಳೆಯಾಗಿದೆ.
ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಈ ಭಾಗಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.