ಬೆಂಗಳೂರು: ಇಲ್ಲಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Bengaluru Airport) ರಸ್ತೆಯಲ್ಲಿ ನ.6 ರಿಂದ 18 ತಿಂಗಳ ಕಾಲ ಗೂಡ್ಸ್ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಬಳ್ಳಾರಿ ರಸ್ತೆಯ ಯುಎಎಸ್ ಸ್ಟಾಫ್ ಕ್ವಾರ್ಟರ್ಸ್ನಿಂದ ಮೆಖ್ರಿ ಸರ್ಕಲ್ವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (GBA) ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ( Elevated Corridor) ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿ ನ.6 ರಿಂದ ಮುಂದಿನ 18 ತಿಂಗಳ ಕಾಲ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆಯಲ್ಲಿ ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳು ಹಾಗೂ ಎಲ್ಲಾ ಮಾದರಿಯ ಸರಕು ಸಾಗಣೆ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ವಾಹನ ಸವಾರರ ಅನುಕೂಲಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ‘ನಮ್ಮ ಮೆಟ್ರೋ’ ಪ್ರಯಾಣ ದರಕ್ಕೆ ಬಿಎಂಟಿಸಿ ಪೈಪೋಟಿ!
ವಿಮಾನ ನಿಲ್ದಾಣದ ಕಡೆಗೆ ಹೆಬ್ಬಾಳ ಮೂಲಕ ತೆರಳುವ ವಾಹನಗಳು ಓಲ್ಡ್ ಹೈ ಗ್ರೌಂಡ್ಸ್ ಜಂಕ್ಷನ್, ಕಲ್ಪನಾ ಜಂಕ್ಷನ್, ಓಲ್ಡ್ ಉದಯ ಟಿವಿ ಜಂಕ್ಷನ್, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ, ಟ್ಯಾನರಿ ರಸ್ತೆ ಹಾಗೂ ನಾಗವಾರ ರಸ್ತೆ ಮಾರ್ಗವಾಗಿ ಸಂಚರಿಸಬೇಕು.
ಯಶವಂತಪುರದಿಂದ ವಿಮಾನ ನಿಲ್ದಾಣಕ್ಕೆ ತೆರಳುವವರು ಮತ್ತಿಕೆರೆ ರಸ್ತೆ ಮೂಲಕ ಬಂದು ಬಿಇಎಲ್ ವೃತ್ತದಲ್ಲಿ ಬಲಕ್ಕೆ ತಿರುಗಿ ರಿಂಗ್ ರೋಡ್ ಮೂಲಕ ಸಂಚರಿಸಬೇಕು. ವಿಮಾನ ನಿಲ್ದಾಣದಿಂದ ನಗರದ ಕೇಂದ್ರ ಭಾಗಕ್ಕೆ ಬರುವ ವಾಹನಗಳು ಹೆಬ್ಬಾಳದಲ್ಲಿ ಎಡಕ್ಕೆ ತಿರುಗಿ ನಾಗವಾರ ಜಂಕ್ಷನ್ ಮೂಲಕ ಬಲಕ್ಕೆ ತಿರುಗಿ ಬಾಂಬೂ ಬಜಾರ್ ಕ್ವೀನ್ಸ್ ರಸ್ತೆ ಮಾರ್ಗ ಬಳಸಬೇಕು. ಮತ್ತೊಂದು ಪರ್ಯಾಯವಾಗಿ ಹೆಬ್ಬಾಳದಲ್ಲಿ ಬಲಕ್ಕೆ ತಿರುಗಿ ಹೆಬ್ಬಾಳ್ ರಿಂಗ್ ರಸ್ತೆ ಕುವೆಂಪು ಸರ್ಕಲ್ ಗೊರಗುಂಟೆಪಾಳ್ಯ ಜಂಕ್ಷನ್ ಮೂಲಕ ಡಾ.ರಾಜ್ಕುಮಾರ್ ರಸ್ತೆ ಮಾರ್ಗವಾಗಿ ನಗರ ಪ್ರವೇಶಿಸಬಹುದು.
ಯಶವಂತಪುರದಿಂದ ವಿಮಾನ ನಿಲ್ದಾಣಕ್ಕೆ ತೆರಳುವವರು ಮತ್ತಿಕೆರೆ ರಸ್ತೆ ಮೂಲಕ ಬಂದು ಬಿಇಎಲ್ ವೃತ್ತದಲ್ಲಿ ಬಲಕ್ಕೆ ತಿರುಗಿ ರಿಂಗ್ ರೋಡ್ ಮೂಲಕ ಸಂಚರಿಸಬೇಕು
ವಿಮಾನ ನಿಲ್ದಾಣದಿಂದ ನಗರದ ಕೇಂದ್ರ ಭಾಗಕ್ಕೆ ಬರುವ ವಾಹನಗಳು ಹೆಬ್ಬಾಳದಲ್ಲಿ ಎಡಕ್ಕೆ ತಿರುಗಿ ನಾಗವಾರ ಜಂಕ್ಷನ್ ಮೂಲಕ ಬಲಕ್ಕೆ ತಿರುಗಿ ಬಾಂಬೂ ಬಜಾರ್ – ಕ್ವೀನ್ಸ್ ರಸ್ತೆ ಮಾರ್ಗ ಬಳಸಬೇಕು
ಮತ್ತೊಂದು ಪರ್ಯಾಯವಾಗಿ ಹೆಬ್ಬಾಳದಲ್ಲಿ ಬಲಕ್ಕೆ ತಿರುಗಿ ಹೆಬ್ಬಾಳ್ ರಿಂಗ್ ರಸ್ತೆ – ಕುವೆಂಪು ಸರ್ಕಲ್ – ಗೊರಗುಂಟೆಪಾಳ್ಯ ಜಂಕ್ಷನ್ ಮೂಲಕ ಡಾ. ರಾಜ್ಕುಮಾರ್ ರಸ್ತೆ ಮಾರ್ಗವಾಗಿ ನಗರ ಪ್ರವೇಶಿಸಬಹುದು
ಯಶವಂತಪುರದಿಂದ ನಗರದ ಕೇಂದ್ರ ಭಾಗಕ್ಕೆ ಬರುವ ವಾಹನಗಳು ಬಿಎಚ್ಇಎಲ್ ಜಂಕ್ಷನ್ – ಮಾರಮ್ಮ ಸರ್ಕಲ್ ಬಳಿ ಬಲಕ್ಕೆ ತಿರುಗಿ ಮಾರ್ಗೋಸಾ ರಸ್ತೆ ಮೂಲಕ ಸಂಚರಿಸಬೇಕು
ಹೆಬ್ಬಾಳದಿಂದ ನಗರಕ್ಕೆ ಬರುವ ವಾಹನಗಳು ಹೆಬ್ಬಾಳ್ ಫ್ಲೈಓವರ್ ಇಳಿದ ಬಳಿಕ ಬ್ಯಾಪ್ಟಿಸ್ಟ್ ಆಸ್ಪತ್ರೆ ಮುಂಭಾಗದ ಸರ್ವಿಸ್ ರಸ್ತೆಗೆ ತೆರಳಿ ಸಿಬಿಐ ಜಂಕ್ಷನ್ ಮೂಲಕ ಬಳ್ಳಾರಿ ಮುಖ್ಯ ರಸ್ತೆಗೆ ಸಂಪರ್ಕ ಪಡೆಯಬಹುದು
ಹೆಬ್ಬಾಳದಿಂದ ಆನಂದನಗರ, ಆರ್.ಟಿ. ನಗರ ಮತ್ತು ಜಯಮಹಲ್ ಕಡೆಗೆ ತೆರಳುವವರು ಬ್ಯಾಪ್ಟಿಸ್ಟ್ ಆಸ್ಪತ್ರೆ ಮುಂಭಾಗದ ಸರ್ವಿಸ್ ರಸ್ತೆ – ಆನಂದನಗರ ಕ್ರಾಸ್ – ಸಿಬಿಐ ಜಂಕ್ಷನ್ ಮೂಲಕ ಆನಂದನಗರ ಮುಖ್ಯ ರಸ್ತೆ ತಲುಪಬೇಕು
ಸಂಚಾರ ಮಾರ್ಗ ಬದಲಾವಣೆ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. . ಇದನ್ನೂ ಓದಿ: ರೈತರಿಗೆ ದೀಪಾವಳಿ ಗಿಫ್ಟ್ – 2,500 ರೂ. ಇದ್ದ ಪರಿಹಾರದ ಮೊತ್ತ 5,000 ರೂ.ಗೆ ಹೆಚ್ಚಳ
