ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line Metro Route) ಮೂರು ದಿನ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.
Curtailment of Metro Trains Services between Peenya Industry & Nagasandra from 13th-15th Aug 2024. Metro Commuters & Public may kindly note the change in the timings during the above days and requested to plan your travel accordingly. pic.twitter.com/FzhcdJwsBh
— ನಮ್ಮ ಮೆಟ್ರೋ (@OfficialBMRCL) August 12, 2024
Advertisement
ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆ ನಡೆಸಬೇಕಾಗಿರುವುದರಿಂದ ಪೀಣ್ಯ ಕೈಗಾರಿಕಾ ಪ್ರದೇಶದಿಂದ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು (Metro Train) ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ
Advertisement
Advertisement
ಆಗಸ್ಟ್ 13 ರಂದು ಕೊನೆಯ ರೈಲು ಸೇವೆ ರಾತ್ರಿ 11 ಗಂಟೆ ಬದಲಿಗೆ 10 ಗಂಟೆಗೆ ಕೊನೆಯಾಗಲಿದೆ. ಆ. 14 ರಂದು ಬೆಳಗ್ಗೆ 5 ಗಂಟೆಗೆ ಬದಲಾಗಿ 6 ಗಂಟೆಗೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11 ಗಂಟೆಗೆ ಬದಲಾಗಿ 10 ಗಂಟೆ ವರೆಗೆ ಮಾತ್ರ ಇರಲಿದೆ. ಆ.15ರಂದು ಬೆಳಗ್ಗೆ 5 ಗಂಟೆಗೆ ಬದಲಾಗಿ 6ಕ್ಕೆ ಸೇವೆ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಿದೆ.
Advertisement
ನಾಗಸಂದ್ರ ನಿಲ್ದಾಣದಿಂದ ಆ.13 ಮತ್ತು 14ರಂದು ಕೊನೆಯ ರೈಲು ಸೇವೆ ರಾತ್ರಿ 11.05 ಗಂಟೆ ಬದಲಾಗಿ 10 ಗಂಟೆಗೆ ಕೊನೆಗೊಳ್ಳುತ್ತದೆ. ಆ.14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆ ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ. ಇದನ್ನೂ ಓದಿ: ಟಿಬಿ ಡ್ಯಾಂನ 19ನೇ ಗೇಟ್ ಕೊಚ್ಚಿ ಹೋಗಿ 46 ಗಂಟೆ; ಶರವೇಗದಲ್ಲಿ ಹೊಸ ಗೇಟ್‌ಗಳ ನಿರ್ಮಾಣ ಕಾರ್ಯ
For the convenience of the Metro Travellers & Public BMRCL is issuing Return Journey Paper Tickets at Flat rate of Rs 30/- on 15-17 & 18th Aug 2024 from Lalbagh Metro Station. Public may utilize this facility for hassle free Travel. pic.twitter.com/LEiw77G6CT
— ನಮ್ಮ ಮೆಟ್ರೋ (@OfficialBMRCL) August 12, 2024
ಆದಾಗ್ಯೂ, ಪೀಣ್ಯ ಕೈಗಾರಿಕಾ ಪ್ರದೇಶದಿಂದ – ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣಗಳ ನಡುವೆ ಆ.13 ಮತ್ತು 14ರಂದು ರಾತ್ರಿ 11, 12 ಗಂಟೆವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆ ಆ.14 ಮತ್ತು 15 ರಂದು ಬೆಳಗ್ಗೆ 5 ಗಂಟೆಗೆ ಪ್ರಾರಂಭವಾಗುತ್ತದೆ. ಆಧಿದರೆ, ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಿಗಮ ತಿಳಿಸಿದೆ.
ಲಾಲ್‌ಬಾಗ್‌ಗೆ ಪೇಪರ್ ಟಿಕೆಟ್ ವ್ಯವಸ್ಥೆ:
ಆಗಸ್ಟ್ 19ರ ವರೆಗೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಆಯೋಜಿಸಿದ್ದು, ವೀಕ್ಷಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ತ್ವರಿತ ಪ್ರಯಾಣಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ವಿತರಿಸುತ್ತಿರುವುದಾಗಿ ಬಿಎಂಆರ್‌ಸಿಎಲ್ ಹೇಳಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಆ. 15, 17 ಮತ್ತು 18ರಂದು ಮೆಟ್ರೋದಲ್ಲಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10ರಿಂದ ರಾತ್ರಿ 8 ಗಂಟೆವರೆಗೆ ಪೇಪರ್ ಟಿಕೆಟ್ ಲಭ್ಯವಿರಲಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ 30 ರೂ. ಪೇಪರ್ ಟಿಕೆಟ್ ಪಡೆದು ಪ್ರಯಾಣಿಸಬಹುದು.
ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ. ಸಾರ್ವಜನಿಕರು ಟೋಕನ್, ಕಾರ್ಡ್, ಕ್ಯೂ ಆರ್ ಕೋಡ್ ಬಳಸಿ ಟಿಕೆಟ್ ಪಡೆಯುವ ಮೂಲಕ ಲಾಲ್‌ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ಮೆಟ್ರೊ ನಿಲ್ದಾಣದಿಂದ ಹಿಂತಿರುಗಲು ಟೋಕನ್‌ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್ ಮತ್ತು ಕ್ಯೂ ಆರ್ ಕೋಡ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ದೇಶದ್ಯಾಂತ ಪ್ರತಿಭಟನೆ