ಬೆಂಗಳೂರು: ಸಿಲಿಕಾನ್ ಸಿಟಿ (Bengaluru Weather) ಸೇರಿದಂತೆ ಹಲವು ಕಡೆ ಇಂದು ಸಂಪೂರ್ಣ ಮೋಡ ಕವಿದ ವಾತಾವರಣವಿದೆ. ಭಾನುವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಸೂರ್ಯ ಕಂಡಿದ್ದೇ ಇಲ್ಲ. ದಿನವಿಡೀ ಕೂಲ್ ಕೂಲ್ ವಾತಾವರಣ ಮುಂದುವರಿದಿದೆ.
ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ (Rain) ಸಹ ಆಗಿದೆ. ಇದಕ್ಕೆ ಕಾರಣ ತಮಿಳುನಾಡು (Tamilnadu), ಕೇರಳ (Kerala) ಸಮುದ್ರ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಎಫೆಕ್ಟ್. ಡಿಸೆಂಬರ್ 18 ಮತ್ತು 19ರಂದು ತಮಿಳುನಾಡು ಮತ್ತು ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಇದೀಗ ಎರಡು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದೆ ಎಫೆಕ್ಟ್ ರಾಜ್ಯದ ಕೆಲವು ಕಡೆ ಆಗಿದೆ. ಇದರಿಂದಾಗಿ ಬೆಂಗಳೂರು ಕೂಲ್ ಸಿಟಿಯಾಗಿದೆ.
Advertisement
Advertisement
ತಮಿಳುನಾಡಿನ ತೂತುಕುಡಿ, ರಾಮನಾಥಪುರಂ, ತಿರುನೆಲ್ವೇಲಿ, ಕನ್ಯಾಕುಮಾರಿ ಮತ್ತು ತೆಂಕಶಿ ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ದಕ್ಷಿಣ ತಮಿಳುನಾಡು ಪ್ರದೇಶದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ತಿರುನಲ್ವೇಲಿ ಮತ್ತು ತೆಂಕಶಿ ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈಗಾಗಲೇ ನಗರ ಪ್ರದೇಶಗಳು ಜಲಾವೃತಗೊಂಡಿತ್ತು. ಇದನ್ನೂ ಓದಿ: ಭಾರೀ ಮಳೆ- ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
Advertisement
ಮಿಚಾಂಗ್ ಚಂಡಮಾರುತದಿಂದ ಉಂಟಾದ ವಿಪರೀತ ಮಳೆ ಮತ್ತು ಪ್ರವಾಹದಿಂದ ಹಾನಿಯಿಂದ ಇಂದ ಇನ್ನೂ ಚೇತರಿಸಿಕೊಂಡಿಲ್ಲ. ಆಗಲೇ ಮತ್ತೆ ಮಳೆ ಜನರ ನಿದ್ದೆಗೆಡಿಸಿದೆ. ಕೇರಳದಲ್ಲೂ ಎರಡ್ಮೂರು ದಿನ ಕೆಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮಾಹಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.
Advertisement
ಒಟ್ಟಾರೆ ತಮಿಳುನಾಡು, ಕೇರಳದ ಸುಳಿಗಾಳಿ ಎಫೆಕ್ಟ್ ಬೆಂಗಳೂರು ನಗರ ಕೂಲ್ ಸಿಟಿ ಮಾಡಿದೆ. ಇದು ಇನ್ನೂ ಎರಡು ದಿನ ಮುಂದುವರಿಯಲಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.