Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ: ಬೊಮ್ಮಾಯಿ

Bengaluru City

ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ: ಬೊಮ್ಮಾಯಿ

Public TV
Last updated: March 17, 2022 7:43 pm
Public TV
Share
2 Min Read
bommai rajanath singh 1
SHARE

ಬೆಂಗಳೂರು: ಬೆಂಗಳೂರು ನಗರ ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಂಡಿದ್ದರು. ಈ ಸಂದರ್ಭ ಕಾರ್ಯಕ್ರಮವನ್ನುದ್ದೇಶಿಸಿ ಮುಖ್ಯಮಂತ್ರಿ ಮಾತನಾಡಿದರು.

bommai rajanath singh

ಬೆಂಗಳೂರಿನಲ್ಲಿ 180 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ರಕ್ಷಣಾ ವಲಯ ಹಾಗೂ ಖಾಸಗಿ ವಲಯದ ಸಂಶೋಧನಾ ಕೇಂದ್ರಗಳಿವೆ. ಕೌಶಲ್ಯಭರಿತ ಮಾನವ ಸಂಪನ್ಮೂಲ ಈ ಕ್ಷೇತ್ರದಲ್ಲಿದೆ. ರಕ್ಷಣಾ ಉತ್ಪಾದನೆ, ಸೆಮಿ ಕಂಡಕ್ಟರ್ ಕೈಗಾರಿಕೆಗಳಿಗೆ ಒತ್ತು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ನೆರವು ಒದಗಿಸುವಂತೆ ಕೇಂದ್ರ ರಕ್ಷಣಾ ಸಚಿವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಬೊಮ್ಮಾಯಿ ಅವರದ್ದು ಸಮರ್ಥ ನಾಯಕತ್ವ: ರಾಜನಾಥ್ ಸಿಂಗ್ ಶ್ಲಾಘನೆ

ರಕ್ಷಣಾ ವಲಯ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಮಂತ್ರಿ ನಾಯಕತ್ವದಲ್ಲಿ ಮುಂಚೂಣಿಯಲ್ಲಿದ್ದು, ದೇಶ ಸುರಕ್ಷಿತವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿದ್ದು, ವಿಶ್ವ ಭಾರತದ ಮಾರ್ಗದರ್ಶನವನ್ನು ನಿರೀಕ್ಷಿಸುತ್ತಿದೆ. ಇದಕ್ಕೆ ಕಾರಣ ನಮ್ಮ ದೇಶದ ಸುಭದ್ರ ಹಾಗೂ ಬಲಿಷ್ಟ ರಕ್ಷಣಾ ವಲಯ. ಡಿಆರ್‌ಡಿಒ ನಡೆಸುವ ಸಂಶೋಧನೆ ಹಾಗೂ ಪರೀಕ್ಷೆಗಳು ಯಶಸ್ವಿಯಾಗಿ, ದೇಶದ ಶಕ್ತಿಯನ್ನು ವೃದ್ಧಿಸಲು ಹಾಗೂ ಬಲಿಷ್ಟಗೊಳಿಸುವಲ್ಲಿ ಸಹಕರಿಸಲಿದೆ ಎಂದರು.

bommai rajanath singh 2

ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಮಾದರಿ ಹಾಗೂ ಅದರ ತಂತ್ರಜ್ಞಾನವನ್ನು ಬಳಸಿ ರಾಜ್ಯದಲ್ಲಿ ನಿರ್ಮಾಣ ಕಾರ್ಯಗಳನ್ನು ಮಾಡುವ ಮೂಲಕ ಸಂಪನ್ಮೂಲ ಹಾಗೂ ಸಮಯದ ಮಿತವ್ಯಯ ಮಾಡಬಹುದಾಗಿದೆ. ನವಭಾರತಕ್ಕಾಗಿ ನವ ಕರ್ನಾಟಕ ನಿರ್ಮಿಸುವ ಸರ್ಕಾರದ ಆಶಯದಲ್ಲಿ ಡಿಆರ್‌ಡಿಒ ಸಹಕಾರ ನೀಡಬೇಕು ಎಂದರು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಕೇವಲ 45 ದಿನಗಳಲ್ಲಿ ನಿರ್ಮಿಸಿರುವ ಫ್ಲೈಟ್ ಕಂಟ್ರೋಲ್ ಸಿಸ್ಟಂ ಒಂದು ಚಮತ್ಕಾರವಾಗಿದೆ. ಒಂದು ಟೆಂಡರ್ ಪ್ರಕ್ರಿಯೆ ಅವಧಿಯಲ್ಲಿ 6 ಮಹಡಿ ಕಟ್ಟಡವನ್ನು ಕಟ್ಟಿರುವುದು ಯಾವುದೇ ಚಮತ್ಕಾರಕ್ಕಿಂತಲೂ ಕಡಿಮೆ ಇಲ್ಲ ಎಂದು ಬಣ್ಣಿಸಿದರು. ಇದನ್ನೂ ಓದಿ: ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ

bommai rajanath singh 3

ಯೋಜನೆಯೂ ಸೇರಿದಂತೆ ಈ ಕಟ್ಟಡ ನಿರ್ಮಾಣಕ್ಕೆ 65 ದಿನಗಳೊಳಗಾಗಿ ಅತ್ಯುತ್ತಮ ಕಟ್ಟಡವನ್ನು ನಿರ್ಮಿಸಲಾಗಿದೆ. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆಗೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯ ಕನಸು ಇಂದು ನನಸಾಗಿದೆ. ಖಾಸಗಿಯವರೊಂದಿಗೆ ಸಮನ್ವಯ, ತಂತ್ರಜ್ಞಾನ, ಆರ್ ಆಂಡ್ ಡಿ ಮುಂತಾವುಗಳನ್ನು ಖಾಸಗಿ ವಲಯದಲ್ಲಿ ಬಳಕೆ ಮಾಡಬಹುದು. ವಿಶ್ವದಲ್ಲಿಯೇ ಅತ್ಯಂತ ದಕ್ಷ ನಿರ್ಮಾಣ ಸಂಸ್ಥೆಯಾಗಿರುವ ಎಲ್ ಆಂಡ್ ಟಿ ರಕ್ಷಣಾ ಸಂಸ್ಥೆಗಳ ಅಗತ್ಯಗಳನ್ನು ಅರ್ಥಮಾಡಿಕೊಳ್ಳುತ್ತದೆ ಎಂದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂದುಕೊಂಡಿದ್ದನ್ನು ಸಾಧಿಸಿ ತೋರಿಸುವವರು. ನಡಿದಂತೆ ನಡೆಯುವ ಸ್ವಭಾವದವರು. ಭಾರತಕ್ಕೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿಯೂ ಅವರು ರಾಜಿ ಮಾಡಿಕೊಳ್ಳುವುದಿಲ್ಲ. ಇದು ಭಾರತದಂತಹ ದೊಡ್ಡ ದೇಶಗಳಿಗೆ ಅಗತ್ಯವೂ ಹೌದು. ಅವರ ಬದ್ಧತೆಯಿಂದ ಈ ಕಟ್ಟಡ ನಿರ್ಮಾಣ ಸಾಧ್ಯವಾಗಿದೆ ಎಂದು ಹೊಗಳಿದರು.

TAGGED:Basavaraj BommaiBasavaraja BommaibengaluruDefense Zonerajnath singhಬಸವರಾಜ ಬೊಮ್ಮಾಯಿಬೆಂಗಳೂರುರಕ್ಷಣಾ ವಲಯರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
49 minutes ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
1 hour ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
1 hour ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?