ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ

Public TV
1 Min Read
Bengaluru Woman commits suicide due to alleged illicit relationship of husband

ಬೆಂಗಳೂರು: ಗಂಡನ (Husband) ಅಕ್ರಮ ಸಂಬಂಧಕ್ಕೆ (Illicit Relationship) ಬೇಸತ್ತು ವಿವಾಹಿತ ಮಹಿಳೆಯೊಬ್ಬರು (Wife) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಂದ್ರಹಳ್ಳಿ ನಡೆದಿದೆ.

ಮಾನಸ(25)ಆತ್ಮಹತ್ಯೆಗೆ ಶರಣಾದ ಮಹಿಳೆ. ಗಂಡನ ಮನೆಯಲ್ಲಿ ವಾಸವಿದ್ದ ಮಾನಸ ಭಾನುವಾರ ಸಂಜೆ 4 ಗಂಟೆಯ ವೇಳೆಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಫ್ಯಾನಿನಲ್ಲಿ ನೇತಾಡುವ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

 

6 ವರ್ಷದ ಹಿಂದೆ ದಿಲೀಪ್ ಜೊತೆ ಮಾನಸ ವಿವಾಹ ನಡೆದಿತ್ತು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಕಳೆದ ಒಂದೂವರೆ ವರ್ಷದಿಂದ ದಿಲೀಪ್‌ ಬೇರೊಂದು ಮಹಿಳೆಯ ಸಹವಾಸ ಮಾಡಿದ್ದಾನೆ. ಈ ವಿಚಾರಕ್ಕೆ ಪತಿ, ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ವಿಚಾರಕ್ಕೆ ಬೇಸತ್ತು ಮಾನಸ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಎರಡು ಜೀವ ಬಲಿ!

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್‌ ಮಾಡಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article