ಬೆಂಗಳೂರು: ದಿನವಿಡೀ ಫೋನ್‌ನಲ್ಲಿ ಮಾತಾಡುವುದಷ್ಟೇ ಪ್ರೀತಿಯಲ್ಲ. ಪೊಳ್ಳು ಮಾತಿನ ಮೆಸೇಜ್‌ನಲ್ಲಿಯೇ ಮುಳುಗಿರುವುದೂ ಪ್ರೀತಿಯಲ್ಲ. ಕಾಲ್ ಮಾಡಲಿಲ್ಲ, ಮೆಸೇಜ್‌ಗೆ ಸರಿಯಾಗಿ ರಿಪ್ಲೆ, ಕೊಡಲಿಲ್ಲ ಅಂದಮಾತ್ರಕ್ಕೆ ಪ್ರೀತಿ ಕಡಿಮೆಯಾಯ್ತು ಅಂತಾ ಅರ್ಥವಲ್ಲ. ನೀನು ಚಂದವಳ್ಳಿಯ ತೋಟದಲ್ಲಿ ಅರಳಿರುವ ಹೂವು ಅಂತಾ ಬಣ್ಣದ ಮಾತುಗಳನ್ನಾಡಿದರೆ ಅದು ಎದ್ವಾತದ್ವಾ ಪ್ರೀತಿ ಇದೆ ಅಂತಲ್ಲ. ಈ ಡೈಲಾಗ್‌ಗಳನ್ನ ನಿತ್ಯ ಪ್ರೇಮಿಗಳಿಂದ ಕೇಳುತ್ತಲೇ ಇರುತ್ತೇವೆ.
View this post on Instagram
ಬೆಂಗಳೂರಿನ ಮಹಿಳೆಯೊಬ್ಬಳು ಒಂದು ಹೆಜ್ಜೆ ಮುಂದೆ ಹೋಗಿ ಪತಿಯ ಹೆಸರನ್ನ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡು ಪ್ರೀತಿಯನ್ನು ವ್ಯಕ್ತಪಡಿಸಿದ್ದಾಳೆ. ಈ ಫೋಟೋವನ್ನ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, `ಮುಂದಿನ ರೀಲ್‌ನಲ್ಲಿ ಅಂತಿಮ ಪ್ರೀತಿ’ ಎಂದೂ ಬರೆದುಕೊಂಡಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ; ಸುರಿಯುತ್ತಿರೋ ಮಳೆಯಲ್ಲೇ ಯುವಕರ ಹುಚ್ಚಾಟ; ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕುಟುಂಬ
ಟ್ಯಾಟೂ ಪಾರ್ಲರ್ ಕಿಂಗ್ ಮೇಕರ್ ಟ್ಯಾಟೂ ಸ್ಟುಡಿಯೋ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಹಿಳೆಯ ಫೋಟೋ ಹಂಚಿಕೊಳ್ಳಲಾಗಿದ್ದು, ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಫೋಟೋದಲ್ಲಿನ ಮಹಿಳೆ ತನ್ನ ಪತಿ ಸತೀಶ್ ಹೆಸರನ್ನ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಳ್ಳುತ್ತಿದ್ದಾಳೆ. 2.68 ಲಕ್ಷಕ್ಕೂ ಅಧಿಕ ಮಂದಿ ಫೋಟೋವನ್ನ ಲೈಕ್ ಮಾಡಿದ್ದಾರೆ.
ಮಹಿಳೆಯ ಫೋಟೋವನ್ನು ನೋಡಿ ಕೆಲವರು ಇದು ಪಕ್ಕಾ ಟ್ರೂ ಲವ್ ಅಂತಾ ಹೊಗಳಿದರೆ, ಇನ್ನೂ ಕೆಲವರು ಇದು ಓವರ್ ಆಕ್ಷನ್, ನಾನು ನನ್ನ ಲೈಕ್ ಅನ್ನು ಕ್ಯಾನ್ಸಲ್ ಮಾಡ್ತೀನಿ. ಇದು ಮೂರ್ಖತನ, ನಿಜವಾದ ಪ್ರೀತಿಯನ್ನ ಈ ರೀತಿ ಸಾಬೀತು ಮಾಡುವ ಅಗತ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಮಳೆ ಆರ್ಭಟ – ಇಂದಿನ RCB ಮ್ಯಾಚ್ ರದ್ದಾಗುತ್ತಾ?