ಬೆಂಗಳೂರು: ಕಾರಿನ (Car) ಡೋರ್‌ಗೆ ಬೈಕ್ ಡಿಕ್ಕಿಯಾಗಿ (Accident) ಕೆಳಗೆ ಬಿದ್ದಿದ್ದ ಮಹಿಳೆ ಮೇಲೆ ಬಿಎಂಟಿಸಿ ಬಸ್ (BMTC Bus) ಹರಿದು ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕಾಮಕ್ಷಿಪಾಳ್ಯದ ನಿವಾಸಿ ಸರೋಜಾ (42) ಎಂದು ಗುರುತಿಸಲಾಗಿದೆ. ಜ್ಞಾನಭಾರತಿಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಸಹೋದರನ ಜೊತೆ ಮಹಿಳೆ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್‌ನ್ನು ತಕ್ಷಣ ತೆಗೆಯಲಾಗಿದೆ. ಇದರಿಂದ ಡೋರ್‌ಗೆ ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ 8 ನಕ್ಸಲರ ಎನ್‌ಕೌಂಟರ್
Advertisement
Advertisement
ಈ ಸಮಯದಲ್ಲಿ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಸರೋಜಾಯವರ ಮೇಲೆ ಹರಿದಿದೆ. ಪರಿಣಾಮ ಸ್ಥಳದಲ್ಲೇ ಅವರು ಸಾವಿಗೀಡಾಗಿದ್ದಾರೆ.
Advertisement
Advertisement
ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: Maha Kumbh 2025 – 77 ದೇಶಗಳ ರಾಜತಾಂತ್ರಿಕರು ಸೇರಿ 30 ಕೋಟಿ ಭಕ್ತರಿಂದ ಪುಣ್ಯಸ್ನಾನ