ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

Public TV
2 Min Read
Garbage Truck 4

– ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್‌

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣಾ (Chennamanakere Police Station) ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಮಹಿಳೆಯನ್ನು ಕೊಲೆ ಮಾಡಿದ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿದೆ. ತಡರಾತ್ರಿ ಆಟೋದಲ್ಲಿ ಬಂದ ಹಂತಕರು ಬಿಬಿಎಂಪಿ ಲಾರಿಯಲ್ಲಿ (BBMP garbage truck) ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದಾರೆ. ಸುಮಾರು 30-40 ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Garbage Truck 2

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಮಹಿಳೆಯ ಗುರುತು ಪತ್ತೆ ಮಾಡಿದ್ದಾರೆ. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿದೆ. ಈಕೆ ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದರು. ಇದೀಗ ಗಂಡನೇ ಕೊಲೆ ಮಾಡಿ, ಬಳಿಕ ಸಿ.ಕೆ ಅಚ್ಚುಕಟ್ಟು ಪ್ರದೇಶದಲ್ಲಿ ಮೃತದೇಹವನ್ನ ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

ಬಿಬಿಎಂಪಿ ಕಸದ ಲಾರಿಯಲ್ಲಿತ್ತು ಮೃತದೇಹ
ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿದೆ. ಬಳಿಕ ಮೃತದೇಹ ಇರೋದು ಗೊತ್ತಾಗಿದೆ. ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿದೆ. ಇದನ್ನೂ ಓದಿ: ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಒಟ್ಟಾರೆ.. ಮಹಿಳೆಯನ್ನು ಬೇರೆಡೆ ಹತ್ಯೆ ಮಾಡಿ ಇಲ್ಲಿಗೆ ಮೃತದೇಹ ಎಸೆಯಲಾಯ್ತಾ ಅಥವಾ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಯ್ತಾ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

Share This Article