ಬೆಂಗಳೂರು: ಮುಜರಾಯಿ ಇಲಾಖೆ ಮಾತೆಯರಿಗೆ ಮಾರ್ಷಲ್ ಆರ್ಟ್ಸ್ ಅನ್ನೋ ಹೊಸ ಯೋಜನೆಯ ಜಾರಿಗೆ ಚಿಂತನೆ ನಡೆಸಿದೆ.
ರಾಜ್ಯ ಮುಜರಾಯಿ ಇಲಾಖೆಯ ವ್ಯಾಪ್ತಿಯ ಆಯ್ದ ಪ್ರಮುಖ 10 ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಸ್ವ ರಕ್ಷಣೆಗೆ ಮಾರ್ಷಲ್ ಆರ್ಟ್ಸ್ ಕಲಿಸುವ ಯೋಜನೆ ಜಾರಿಗೆ ಚಿಂತಿಸಲಾಗುತ್ತಿದೆ. ದೇವಸ್ಥಾನದಲ್ಲಿ ಹಿಂದೂ ಹೆಣ್ಣು ಮಕ್ಕಳಿಗೆ ಸೆಲ್ಫ್ ಡಿಫೆನ್ಸ್ ಹೇಳಿ ಕೊಡುವ ಬಗ್ಗೆ ಕಾರ್ಯ ಯೋಜನೆ ರೂಪಿಸುವ ಸಂಬಂಧ ಮುಜರಾಯಿ ಸಚಿವರು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Advertisement
Advertisement
ಪಬ್ಲಿಕ್ ಟಿವಿಗೆ ಸಿಕ್ಕ ಮಾಹಿತಿ ಪ್ರಕಾರ, ಹಿಂದೂ ಮಹಿಳೆಯರ ರಕ್ಷಣೆಗೆ ದೇವಸ್ಥಾನಗಳಲ್ಲೇ ಆತ್ಮ ರಕ್ಷಣಾ ಕಲೆ ಕಲಿಸಬೇಕು, ಅದಕ್ಕೆ ರಾಜ್ಯದ ಆಯ್ದ 10 ದೇವಸ್ಥಾನಗಳಲ್ಲಿ ಆತ್ಮರಕ್ಷಣಾ ಕಲೆಯ ಅಭ್ಯಾಸ ಆರಂಭಿಸುವ ಬಗ್ಗೆ ಕಾರ್ಯಸೂಚಿ ಸಿದ್ಧಪಡಿಸುವಂತೆ ಮುಜರಾಯಿ ಸಚಿವರು ತಮ್ಮ ಇಲಾಖಾ ಸಿಬ್ಬಂಧಿಗೆ ಸೂಚಿಸಿದ್ದಾರೆ.
Advertisement
Advertisement
ಸಂಘಟನೆಯೊಂದರ ಮನವಿ ಮೇರೆಗೆ ಸಚಿವರು ಈ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಮುಜರಾಯಿ ಇಲಾಖೆಗೂ ಮಾರ್ಷಲ್ ಆರ್ಟ್ಸ್‌ಗೂ ಏನು ಸಂಬಂಧವಿದೆ ಗೊತ್ತಿಲ್ಲ. ಆದರೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಇಂತದೊಂದು ಯೋಜನೆ ಜಾರಿಗೆ ಚಿಂತನೆ ನಡೆದಿದೆ.