Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಶವಂತಪುರ- ಕಾರವಾರ- ವಾಸ್ಕೋ ಮಾರ್ಗದಲ್ಲಿ ಹೊಸ ರೈಲು ಸಂಚಾರ ಆರಂಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಶವಂತಪುರ- ಕಾರವಾರ- ವಾಸ್ಕೋ ಮಾರ್ಗದಲ್ಲಿ ಹೊಸ ರೈಲು ಸಂಚಾರ ಆರಂಭ

Bengaluru City

ಯಶವಂತಪುರ- ಕಾರವಾರ- ವಾಸ್ಕೋ ಮಾರ್ಗದಲ್ಲಿ ಹೊಸ ರೈಲು ಸಂಚಾರ ಆರಂಭ

Public TV
Last updated: March 7, 2020 1:16 pm
Public TV
Share
3 Min Read
ypr kwr vasco train
SHARE

– ಹೊಸ ರೈಲಿಗೆ ಬಿಎಸ್‍ವೈ ಚಾಲನೆ

ಬೆಂಗಳೂರು: ಕಾರವಾರ ಮಾರ್ಗವಾಗಿ ಯಶವಂತಪುರ-ವಾಸ್ಕೋ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದರು.

ಯಶವಂತಪುರ ರೈಲು ನಿಲ್ದಾಣದಲ್ಲಿ ಹೊಸ ರೈಲಿಗೆ ಸಿಎಂ ಚಾಲನೆ ನೀಡಿದರು. ಇದೇ ವೇಳೆ ಯಶವಂತಪುರ-ವಿಜಯಪುರ-ಯಶವಂತಪುರ ರೈಲನ್ನು ಎಲ್‍ಎಚ್‍ಬಿ ಕೋಚ್‍ಗಳಾಗಿ ಪರಿವರ್ತನೆ ಕಾರ್ಯಕ್ರಮಕ್ಕೂ ಚಾಲನೆ ನೀಡಿದರು.

ಮುಖ್ಯಮಂತ್ರಿ ಶ್ರೀ @BSYBJP ರವರು ಬೆಂಗಳೂರು-ಪಡೀಲ್-ಕುಂದಾಪುರ-ಕಾರವಾರ-ವಾಸ್ಕೋ ಮಾರ್ಗವಾಗಿ ಸಂಚಾರ ಮಾಡುವ ಹೊಸ ರೈಲಿಗೆ ಯಶವಂತಪುರ ರೈಲು ನಿಲ್ದಾಣದಲ್ಲಿ ಇಂದು ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ @SureshAngadi_ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ @ShobhaBJP ಉಪಸ್ಥಿತರಿದ್ದರು. pic.twitter.com/F59flrMLgJ

— BJP Karnataka (@BJP4Karnataka) March 7, 2020

ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ, ಯಶವಂತಪುರ-ಕಾರವಾರ-ವಾಸ್ಕೋ ಮಾರ್ಗದಲ್ಲಿ ಇಂದು ಹೊಸ ರೈಲು ಚಾಲನೆ ಸಂತಸ ತಂದಿದೆ. ಈ ರೈಲು ಸಂಜೆ ಬೆಂಗಳೂರಿಂದ ಹೊರಟು ಬೆಳಗ್ಗೆ ಕಾರವಾರಕ್ಕೆ ತಲುಪಲಿದೆ. ಹೊಸ ರೈಲಿನಿಂದ ಶಿರಾಡಿಘಾಟ್ ಮೇಲಿನ ವಾಹನ ಸಂಚಾರ ಒತ್ತಡ ಕಡಿಮೆಯಾಗಲಿದೆ. ನಾನು ಮುಖ್ಯಮಂತ್ರಿಯಾದ ಹೊಸದರಲ್ಲಿ ರೈಲ್ವೆ ಯೋಜನೆಗಳಿಗೆ ಭೂಮಿ, ಅರ್ಧ ವೆಚ್ಚ ಕೊಡುವ ಭರವಸೆ ಕೊಟ್ಟಿದ್ದೆ. ಸರ್ಕಾರ ರೈಲ್ವೆ ಯೋಜನೆಗಳಿಗೆ ಸದಾ ಬೆಂಬಲ ಕೊಡಲಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೊಸ ರೈಲುಗಳ ಸೇವೆ ಸಿಗಲಿದೆ ಎಂದರು.

ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ ಮಾತನಾಡಿ, ಈ ಹೊಸ ರೈಲಿನ ಇನ್ನೊಂದು ವಿಶೇಷ ಎಂಬಂತೆ ರೈಲು ಚಾಲನೆ ಮಾಡುವವರಿಬ್ಬರೂ ಮಹಿಳಾ ಲೋಕೊಪೈಲಟ್ ಗಳು. ಸಂಸದೆ ಶೋಭಾ ಕರಂದ್ಲಾಜೆಯವರು ಈ ಹೊಸ ರೈಲಿಗೆ ಒತ್ತಾಯ ಮಾಡಿದವರು. ಶೋಭಾ ಅವರು ರಾಣಿ ಚೆನ್ನಮ್ಮ ರೀತಿಯಲ್ಲಿ ಹೋರಾಡಿ ಈ ಹೊಸ ರೈಲು ಸಂಚರಿಸಲು ಕಾರಣರಾಗಿದ್ದಾರೆ. ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳಾ ಲೋಕೊಪೈಲಟ್‍ಗಳಿಂದ ರೈಲು ಚಾಲನೆ ಮಾಡಲಾಗುತ್ತಿದೆ ಎಂದರು.

ಅವರೊಂದಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಾಯಿತು.

ಚಿಕ್ಕಮಗಳೂರು ಹಾಗೂ ಕಾರವಾರ ಭಾಗದ ಜನರ ಬಹುದಿನಗಳ ಬೇಡಿಕೆ ಆಗಿದ್ದ ಈ ರೈಲು ಸೇವೆಗೆ ಇಂದು ಚಾಲನೆ ನೀಡಲಾಗಿದೆ‌‌. ಜೊತೆಗೆ ಈ ರೈಲು ಸೇವೆಗೆ ಸಂಸದರಾದ ಶೋಭಾ ಕರಂದ್ಲಾಜೆ ಅವರು ಸತತವಾಗಿ ಪ್ರಯತ್ನಿಸಿದ್ದನ್ನು ಸ್ಮರಿಸಲಾಯಿತು . pic.twitter.com/ucv9gxxJwa

— Mangal Suresh Angadi (Modi Ka Parivar) (@MangalSAngadi) March 7, 2020

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಇನ್ನೂ ಕೆಲವು ಜಿಲ್ಲೆಗಳಿಗೆ ರೈಲು ಸೇವೆ ದೊರೆತಿಲ್ಲ, ನಾನು ಪ್ರತಿನಿಧಿಸುವ ಚಿಕ್ಕಮಗಳೂರಿಗೆ ರೈಲು ಬಂದಿದ್ದೇ ನಮ್ಮ ಸರ್ಕಾರ ಬಂದ ಮೇಲೆ. ಹಬ್ಬಗಳು ಬಂದರೆ ನಮ್ಮ ಭಾಗದ ಜನ ಟ್ಯಾಕ್ಸಿ, ಟಿಟಿ ಮಾಡಿಕೊಂಡು ಊರಿಗೆ ಹೋಗಬೇಕಿತ್ತು. ಬೆಂಗಳೂರಿನಲ್ಲಿ ಕರಾವಳಿಯ ಸಾಕಷ್ಟು ಜನ ಇದ್ದಾರೆ. ಆದರೆ ನಮ್ಮ ಊರುಗಳಿಗೆ ಹೋಗಲು ರೈಲು ಸೇವೆ ಇರಲಿಲ್ಲ. ಇಂದು ನಮ್ಮ ಭಾಗದ ಜನರ ನಿರೀಕ್ಷೆ ಈಡೇರಿದೆ ಎಂದರು.

https://twitter.com/ShobhaBJP/status/1236162444264796163

ಉಡುಪಿ, ಭಟ್ಕಳ, ಕಾರವಾರ ಮಾರ್ಗದಲ್ಲಿ ಈ ಹೊಸ ರೈಲು ಸಂಚರಿಸಲಿದೆ. ಕೇಂದ್ರ ಸಚಿವ ಸುರೇಶ್ ಅಂಗಡಿಯವರಿಗೆ ಅಭಿನಂದನೆಗಳು. ಇಂದು ಹೊಸ ರೈಲು ಸೇವೆ ಸಿಕ್ಕಿದೆ. ಆದರೆ ಈ ಮಾರ್ಗದಲ್ಲಿರುವ ಹಳೆ ರೈಲನ್ನು ನಿಲ್ಲಿಸಬೇಡಿ. ಹಳೆಯ ರೈಲು ಸಂಚಾರ ಮುಂದುವರಿಯಲಿ, ಯಡಿಯೂರಪ್ಪನವರು ಮೊದಲ ಸಲ ಸಿಎಂ ಆಗಿದ್ದಾಗಿಂದಲೂ ರೈಲ್ವೆ ಯೋಜನೆಗಳಿಗೆ ಬೆಂಬಲಿಸುತ್ತಿದ್ದಾರೆ. ರೈಲ್ವೆ ಯೋಜನೆಗಳಿಗೆ ಶೇ.50ರಷ್ಟು ನೆರವು ಕೊಡುವುದಾಗಿ ಹೇಳಿದ ಮೊದಲ ಸಿಎಂ ಯಡಿಯೂರಪ್ಪ. ಅಲ್ಲದೆ ಶಿವಮೊಗ್ಗ ಮಾರ್ಗವಾಗಿ ಹಾಸನ, ಬೇಲೂರು, ಚಿಕ್ಕಮಗಳೂರು, ಶೃಂಗೇರಿಗೆ ರೈಲು ಸೇವೆ ಅಗತ್ಯವಿದೆ. ಈ ಬೇಡಿಕೆಯನ್ನೂ ಶೀಘ್ರದಲ್ಲೇ ಕೇಂದ್ರ ಸರ್ಕಾರ ಈಡೇರಿಸಲಿ ಎಂದು ಆಶಯ ವ್ಯಕ್ತಪಡಿಸಿದರು.

train

ರೈಲು ವೇಳಾಪಟ್ಟಿ: ಪ್ರತಿ ದಿನ ಸಂಜೆ 6ಕ್ಕೆ ಯಶವಂತಪುರದಿಂದ 14 ಬೋಗಿಗಳ ಈ ರೈಲು ಹೊರಡಲಿದೆ. ಕುಣಿಗಲ್ ಮೂಲಕವಾಗಿ ಹಾಸನಕ್ಕೆ ರಾತ್ರಿ 9.15ಕ್ಕೆ, ಪಡೀಲ್ ಗೆ ಬೆಳಗ್ಗಿನ ಜಾವ 3ಕ್ಕೆ, ಉಡುಪಿಗೆ ಬೆಳಗ್ಗೆ 5ಕ್ಕೆ, ಕುಂದಾಪುರ 5.30ಕ್ಕೆ, ಕಾರವಾರಕ್ಕೆ ಬೆಳಗ್ಗೆ 8.30 ಮತ್ತು ವಾಸ್ಕೋಗೆ ಬೆಳಗ್ಗೆ 10.30ಕ್ಕೆ ತಲುಪಲಿದೆ. ಮರಳಿ ವಾಸ್ಕೋದಿಂದ ಸಂಜೆ 5.20ಕ್ಕೆ ಹೊರಡಲಿದ್ದು, ಸಂಜೆ 7.25ಕ್ಕೆ ಕಾರವಾರ, 9.30ಕ್ಕೆ ಕುಂದಾಪುರ, 10ಕ್ಕೆ ಉಡುಪಿ, ಬೆಳಗ್ಗೆ 8ಕ್ಕೆ ಯಶವಂತಪುರ ತಲುಪಲಿದೆ. ಯಶವಂತಪುರ, ಚಿಕ್ಕಬಾಣಾವರ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಾಣಿಯೂರು, ಕಬಕ, ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರ್, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ, ಅಂಕೋಲಾ, ಕಾರವಾರ, ವಾಸ್ಕೋಗಳಲ್ಲಿ ಈ ಹೊಸ ರೈಲು ನಿಲುಗಡೆಯಾಗಲಿದೆ.

TAGGED:bengalurukarwarPublic TVshobha karandlajesuresh angaditrainVascoYediyurappaYeshwantpurಕಾರವಾರಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಯಶವಂತಪುರರೈಲುವಾಸ್ಕೋಶೋಭಾ ಕರಂದ್ಲಾಜೆಸುರೇಶ್ ಅಂಗಡಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
8 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
8 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?