ಬೆಂಗಳೂರು: ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ದೀಪು ಹಾಗೂ ಅಖಿಲೇಶ್ ಎಂದು ಗುರುತಿಸಲಾಗಿದೆ.
ಯುವತಿಗೆ ಕಂಠಪೂರ್ತಿ ಕುಡಿಸಿದ ಯುವಕರು ಆಕೆಯನ್ನು ಕರೆದುಕೊಂಡು ಹೋಗಿ ಹೆಚ್ ಎಎಲ್ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾರೆ. ಈಜೀಪುರ ಮುಖ್ಯ ರಸ್ತೆಯಿಂದ ಯುವತಿಯನ್ನ ಯುವಕರು ಕರೆದುಕೊಂಡು ಹೋಗಿದ್ದಾರೆ.
ನಂತರ ಯುವತಿಯನು ಯುವಕರು ರೇಪ್ ಮಾಡಿದ್ದಾರೆ. ಅಲ್ಲದೆ ಅತ್ಯಾಚಾರದ ವಿಷಯ ಯಾರಿಗಾದ್ರು ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಸಿದ್ದಾರೆ. ಇದನ್ನೂ ಓದಿ: ಗೋ ಮೂತ್ರದಲ್ಲಿ ಸ್ನಾನ ಮಾಡೋದು ನೀವೇ ಅಲ್ವಾ- ಅಮೆರಿಕದಲ್ಲಿ ಭಾರತೀಯರ ಮೇಲೆ ಜನಾಂಗೀಯ ನಿಂದನೆ
ಘಟನೆ ಬಳಿಕ ಸಂತ್ರಸ್ತ ಯುವತಿ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ವಿವೇಕ್ ನಗರ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.