ಬೆಂಗಳೂರು: ರಾತ್ರಿ ವೇಳೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದ ಯುವತಿಗೆ ನಾಲ್ವರು ಪುಂಡರು ಸೇರಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಆಡುಗೋಡಿ (Adugodi) ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ಫೆ.18 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವತಿ ಮಧ್ಯರಾತ್ರಿ ವೇಳೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದಳು. ಈ ವೇಳೆ ಕೋರಮಂಗಲ ಆಟೋ ನಿಲ್ದಾಣದ ಬಳಿ ಬಂದಿದ್ದ ನಾಲ್ವರು ಯುವಕರು, ಯುವತಿಯ ಮೈ ಮುಟ್ಟಿ ಕಿರುಕುಳ ನೀಡಿದ್ದಾರೆ. ಈ ವೇಳೆ ಯುವತಿ ಪ್ರತಿರೋಧ ತೋರಿದಾಗ ಆಕೆಯ ಮೇಲೆ ಹಲ್ಲೆ ಸಹ ನಡೆಸಿದ್ದಾರೆ. ಇದನ್ನು ನೋಡಿದ ಯುವತಿಯ ಸ್ನೇಹಿತ ಯುವತಿಯ ಸಹಾಯಕ್ಕೆ ಬಂದಿದ್ದು, ಆತನ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ
ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್ ಹರಿದು ಬೈಕ್ ಸವಾರ ದಾರುಣ ಸಾವು